ಬೆಂಗಳೂರು :
ಮಾಜಿ ಶಾಸಕ, ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಮಧು ಬಂಗಾರಪ್ಪರನ್ನು ಕಾಂಗ್ರೆಸ್ ಗೆ ಕರೆತರಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಈ ಕುರಿತಂತೆ ಕಾಗೋಡು ತಿಮ್ಮಪ್ಪ ಸಾಗರದಲ್ಲಿ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಧು ಬಂಗಾರಪ್ಪಗೆ ಕಾಂಗ್ರೆಸ್ ಪಕ್ಷಕ್ಕೆ ಬಾ ಎಂದು ಕಾಗೋಡು ತಿಮ್ಮಪ್ಪ ಹೇಳಿದ್ದು, ಯುಗಾದಿ ಬಳಿಕ ಕಾಂಗ್ರೆಸ್‌ಗೆ ಬರುವುದಾಗಿ ಮಧು ಬಂಗಾರಪ್ಪ ತಿಮ್ಮಪ್ಪರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರ ಉಪಚುನಾವಣೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡ ಮಧುಬಂಗಾರಪ್ಪ ಸದ್ಯ ಜೆಡಿಎಸ್ ಪಕ್ಷದ ಸಂಘಟನೆಗಳಿಂದ ದೂರವೇ ಉಳಿದಿದ್ದಾರೆ. ಇದೀಗ ಅವರು ಜೆಡಿಎಸ್ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಗೆ ಸೇರಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ