ಬೆಳಗಾವಿ:
ವಿಧಾನಮಂಡಲದ ಚಳಿಗಾಲದ ಅಧಿವೇಶನದ ಕೊನೆಯ ದಿನದ ಕಲಾಪ ಉಭಯ ಸದನಗಳಲ್ಲೂ ಗದ್ದಲದೊಂದಿಗೆ ಕೊನೆಗೊಂಡಿತು.
ಅಧಿವೇಶನದ ಕೊನೆಯ ದಿನವಾದ ಇಂದು ಸಾಲಮನ್ನಾ ದಿನಾಂಕವನ್ನು ಸ್ಪಷ್ಟಪಡಿಸಬೇಕು, ಪ್ರತಿಪಕ್ಷ ನಾಯಕ ಯಡಿಯೂರಪ್ಪ ವಿರುದ್ಧ ಕುಮಾರಸ್ವಾಮಿ ನೀಡಿರುವ ಆಕ್ಷೇಪಾರ್ಹ ಹೇಳಿಕೆಗೆ ಕ್ಷಮೆ ಕೇಳಬೇಕು ಎಂದು ಗುರುವಾರ ಸಂಜೆಯಿಂದ ಬಿಜೆಪಿ ನಡೆಸುತ್ತಿದ್ದ ಧರಣಿ ಇಂದು ಬೆಳಗ್ಗೆಯೂ ಸಹಾ ಮುಂದುವರೆದಿತ್ತು.
ವಿಧಾನಸಭೆಯಲ್ಲಿ ಶುಕ್ರವಾರ ಕಲಾಪ ಆರಂಭವಾಗುತ್ತಿದ್ದಂತೆಯೇ ವಿರೋಧಪಕ್ಷದ ಸದಸ್ಯರು ರೈತರ ಸಾಲಮನ್ನಾಕ್ಕೆ ಒತ್ತಾಯಿಸಿ ಸಭಾಧ್ಯಕ್ಷರ ಪೀಠದ ಎದುರು ಧರಣಿ ಆರಂಭಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ‘ಸರ್ಕಾರ ಬುರುಡೆ ಬಿಡುತ್ತಿದೆ. ತಕ್ಷಣ ಸಾಲ ಮನ್ನಾ ಮಾಡಬೇಕು’ ಎಂದು ಒತ್ತಾಯಿಸಿದರು.
ಕಲಾಪ ನಡೆಸಲು ಅನುವು ಮಾಡಿಕೊಡುವಂತೆ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಪದೇ ಪದೇ ಮನವಿ ಮಾಡಿದರೂ ಧರಣಿ ಕೈಬಿಡಲಿಲ್ಲ. ಬಳಿಕ ಸಭಾಧ್ಯಕ್ಷರು ಸದನವನ್ನು ಅನಿರ್ದಿಷ್ಟಾವಧಿವರೆಗೆ ಮುಂದೂಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ