ಬೆಂಗಳೂರು :
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾಗೂ ಕೊರೊನಾ ಭೀತಿ ಎದುರಾಗಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೋಲಿಸ್ ಕಾನ್ ಸ್ಟೇಬಲ್ ಪತಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಕಳೆದ ಹಲವು ದಿನಗಳಿಂದ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಹೀಗಾಗಿ ಸಿಬ್ಬಂದಿ ಕಚೇರಿಯನ್ನ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಸದ್ಯ ಮುಖ್ಯಮಂತ್ರಿಗಳ ಎಲ್ಲ ಕಾರ್ಯಕ್ರಮಗಳು ವಿಧಾನಸೌಧಕ್ಕೆ ಶಿಫ್ಟ್ ಮಾಡಲಾಗಿದೆ.
ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಪತಿಗೆ ಕೊರೊನಾ ಪಾಸಿಟಿವ್ ಕಂಡುಬಂದ ಬೆನ್ನಲ್ಲೇ ಮಹಿಳಾ ಅಧಿಕಾರಿಗೂ ಗುರುವಾರ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರ ವರದಿ ಇಂದು ಸಂಜೆ ಬರಲಿದೆ. ಈ ಹಿನ್ನಲೆಯಲ್ಲಿ ಗೃಹ ಕಚೇರಿ ಕೃಷ್ಣಾಗೂ ಭೀತಿ ಎದುರಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
