ಚಿತ್ರದುರ್ಗ:
ಮೈದುನನ ಕಿರುಕುಳದಿಂದ ಬೇಸತ್ತು ಅತ್ತಿಗೆ ಡೆತ್ ನೋಟ್ ಬರೆದಿಟ್ಟು ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.
ಜ್ಯೋತಿ(40) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಜ್ಯೋತಿ ಮೃತದೇಹದ ಬಳಿ ಡೆತ್‍ನೋಟ್ ಪತ್ತೆಯಾಗಿದ್ದು, ಅದರಲ್ಲಿ ಮೈದುನ ಪ್ರಭುಲಿಂಗ ಮನೆಗೆ ವಿದ್ಯುತ್, ನೀರು ಸರಬರಾಜು ಕಡಿತಗೊಳಿಸಿ ಕಿರುಕುಳ ನೀಡುತ್ತಿದ್ದ. ಹೀಗಾಗಿ ಆತನ ದರ್ಪ, ದೌರ್ಜನ್ಯ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ.
ಮೈದುನ ಪ್ರಭುಲಿಂಗ ದಾವಣಗೆರೆ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ಕಾರು ಚಾಲಕನಾಗಿದ್ದಾನೆ.
ಮಹಿಳೆ ಸಾವಿಗೆ ಕಾರಣವಾಗಿರುವ ಪ್ರಭುಲಿಂಗನನ್ನು ಬಂಧಿಸುವಂತೆ ಆಗ್ರಹಿಸಿ ಮೃತ ಜ್ಯೋತಿ ಸಂಬಂಧಿಗಳು ಪ್ರತಿಭಟಿಸಿದ್ದಾರೆ. ಇನ್ನು ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
