ಮಂಗಳೂರು :
ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕುಂಟಿಕಾನ ಬಳಿ ನಡೆದಿದೆ.
ನ.27 ರ ಬುಧವಾರ ಈ ಘಟನೆ ನಡೆದಿದ್ದು, ಮೃತರನ್ನುಪಂಜಿಮೊಗರು ನಿವಾಸಿ ಯೋಗೇಶ್ ಎಂಬವರ ಪತ್ನಿ ಪ್ರಿಯಾ ಸುವರ್ಣ (43) ಎಂದು ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ ಬ್ಯೂಟಿಶಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಿಯಾ ತಮ್ಮ ಸ್ಕೂಟರ್ ನಲ್ಲಿ ಕೆಪಿಟಿಯಿಂದ ಮನೆ ಕಡೆ ತೆರಳುತ್ತಿದ್ದ ಸಂದರ್ಭ ರಾಷ್ಟ್ರೀಯ ಹೆದ್ದಾರಿ 66 ರ ಬಳಿ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಪ್ರಿಯಾ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ತೀವ್ರವಾದ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಪ್ರಿಯಾ ಇಬ್ಬರು ಮಕ್ಕಳು ಹಾಗೂ ಪತಿಯನ್ನು ಅಗಲಿದ್ದಾರೆ.
ಅಪಘಾತವಾದ ಬಳಿಕ ಲಾರಿ ಚಾಲಕ ಲಾರಿ ಜೊತೆ ಪರಾರಿಯಾಗಿದ್ದು, ಪೊಲೀಸರು ಚಾಲಕನನ್ನು ಕುದುರೆಮುಖದಲ್ಲಿ ವಶಕ್ಕೆ ಪಡೆದಿದ್ದಾರೆ. ಮಂಗಳೂರು ನಗರ ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ