ಚಿಕ್ಕಮಗಳೂರು:
ಒಂಟಿ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿ, ದರೋಡೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಲಕ್ಷ್ಮೀಶ ನಗರದಲ್ಲಿ ನಡೆದಿದೆ.
ಕವಿತಾ(31)ಕೊಲೆಯಾದ ದುರ್ದೈವಿ. ದಂತವೈದ್ಯ ರೇವಂತ್ ಅವರ ಪತ್ನಿ. ಕವಿತಾ ಅವರ ಗಂಡ ಕಡೂರು ತಾಲೂಕಿನ ಬೀರೂರು ನಗರದಲ್ಲಿ ದಂತ ವೈದ್ಯರಾಗಿದ್ದಾರೆ. ಅವರು ಕ್ಲಿನಿಕ್ ಗೆ ಹೋದ ನಂತರ ಈ ದುರ್ಘಟನೆ ನಡೆದಿದೆ.
ಕವಿತಾ ಅವರ ಗಂಡ ಕಡೂರು ತಾಲೂಕಿನ ಬೀರೂರು ನಗರದಲ್ಲಿ ದಂತ ವೈದ್ಯರಾಗಿದ್ದಾರೆ. ಅವರು ಕ್ಲಿನಿಕ್ ಗೆ ಹೋದ ನಂತರ ಈ ದುರ್ಘಟನೆ ನಡೆದಿದೆ. 8.15ಕ್ಕೆ ಅವರ ಸಾವಿನ ಸಂಗತಿ ಹೊರಬಂದಿದೆ.
ಸ್ಥಳಕ್ಕೆ ಭೇಟಿ ನೀಡಿರೋ ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಪ್ರವೇಶ ದ್ವಾರ, ಹಿಂಬದಿ ಪ್ರದೇಶದ ಸಿಸಿ ಟಿವಿ ಕ್ಯಾಮೆರಾ ಫೂಟೇಜ್ ಗಳನ್ನು ಪಡೆದುಕೊಂಡಿದ್ದಾರೆ. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರುತಿ, ಕಡೂರು ಠಾಣೆ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಶ್ವಾನ ದಳ ಕರೆಸಲಾಗಿದೆ. ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಶಿವಮೊಗ್ಗಕ್ಕೆ ಒಯ್ಯಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
