ಬೆಂಗಳೂರು:
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥದಲ್ಲಿ ಮಾಜಿ ಮುಖ್ಯಮಂತ್ರಿಗಳ ಮುಖಾಮುಖಿಯಾಗಿದೆ.
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಶಾಸಕ ಎಂ.ಕೃಷ್ಣಪ್ಪ ಅವರ ಸಹೋದರನ ಮೊಮ್ಮಗಳಾದ ರೇವತಿ ಅವರೊಂದಿಗೆ ನಿಖಿಲ್ ಕುಮಾರಸ್ವಾಮಿ ವಿವಾಹದ ನಿಶ್ಚಿತಾರ್ಥವು ಎರಡೂ ಕುಟುಂಬಗಳ ಬಂಧು-ಬಳಗ ಹಾಗೂ ಹಿರಿಯರ ಸಮ್ಮುಖದಲ್ಲಿ ರೇವತಿಗೆ ನಿಖಿಲ್ ಕುಮಾರಸ್ವಾಮಿ ವಜ್ರದ ಉಂಗುರ ತೊಡಿಸಿದರು.
ಆಪ್ತರಿಗೆ ನಿಶ್ಚಿತಾರ್ಥದಲ್ಲಿ ಪಾಲ್ಗೊಳ್ಳಲು ಕುಮಾರಸ್ವಾಮಿ ಆಹ್ವಾನ ನೀಡಿದ್ದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಹಲವಾರು ನಾಯಕರು ಸಮಾರಂಭದಲ್ಲಿ ಪಾಲ್ಗೊಂಡು ನವ ಜೋಡಿಗೆ ಶುಭಾಶಗಳನ್ನು ಸಲ್ಲಿಸಿದ ನಾಯಕರು ಕುಮಾರಸ್ವಾಮಿ ಕೈ ಕುಲುಕಿದರು. ಈ ಮೂಲಕ ನಿಶ್ಚಿತಾರ್ಥ ಹಾಲಿ, ಮಾಜಿ ಮುಖ್ಯಮಂತ್ರಿಗಳ ಸಮಾಗಮಕ್ಕೆ ಸಾಕ್ಷಿಯಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ