ಬೆಂಗಳೂರು :
ಕರ್ನಾಟಕದ ಒಂದಿಂಚು ಜಾಗವನ್ನೂ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
Karnataka CM BS Yediyurappa on Belgaum border dispute between Karnataka&Maharashtra: As per Mahajan Commission it is clear which part has been given to Maharashtra & Karnataka. Creating this sort of controversy is not fair. Will not give not even single inch of land. pic.twitter.com/FNNvKwN4b0
— ANI (@ANI) December 30, 2019
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಕರ್ನಾಟಕ ರಾಜ್ಯಗಳಿಗೆ ಯಾವ ಯಾವ ಪ್ರದೇಶಗಳು ಸೇರಬೇಕು ಎಂಬುದು ಹಿಂದೆಯೇ ನಿರ್ಧಾರವಾಗಿದೆ. ರಾಜ್ಯದ ಗಡಿಯಲ್ಲಿ ಶಾಂತಿ ಕಾಪಾಡಲು ಸರ್ಕಾರ ಬದ್ಧವಾಗಿದೆ. ಗಡಿ ನಿಗದಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ. ಇದರಲ್ಲಿ ಯಾವುದೇ ಗೊಂದಲವಿಲ್ಲ, ಕರ್ನಾಟಕದ ಒಂದಿಂಚು ಜಾಗವನ್ನೂ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಗಡಿ ವಿವಾದವನ್ನು ಸೃಷ್ಟಿಸುತ್ತಿದೆ. ಇದಕ್ಕೆ ನಾವು ಸರಿಯಾದ ಉತ್ತರ ನೀಡುತ್ತೇವೆ. ಕರ್ನಾಟಕದ ಒಂದಿಂಚು ಜಾಗವನ್ನು ನಾವು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ, ಕನ್ನಡಿಗರು ಶಾಂತಿಯನ್ನು ಕಾಪಾಡಿ ಎಂದು ಮನವಿ ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ