ಕಲಬುರಗಿ:

ನಗರದಲ್ಲಿ ಹಾಡುಹಗಲೇ ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಇಂದು ನಡೆದಿದೆ.
ಬಸವರಾಜ್ ಆಮ್ಟೆ (23) ದಾಳಿಗೊಳಗಾದ ಯುವಕ. ನಗರದ ಐವಾನ್ ಎ ಶಾಹಿ ಸಕ್ಯೂಟ್ ಹೌಸ್ ಬಳಿ ಕೃತ್ಯ ಎಸಗಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಬಸವರಾಜ್ ರೈಲ್ವೆ ಇಲಾಖೆಯಲ್ಲಿ ಹೌಸ್ ಕಿಪಿಂಗ್ ಸೂಪರ್‍ವೈಸರ್ ಆಗಿ ಕೆಲಸ ಮಾಡುತ್ತಿದ್ದ. ಇಂದು ಬೈಕ್ ಮೇಲೆ ತೆರಳುತ್ತಿರುವಾಗ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಬಸವರಾಜ ಮುಖ, ತಲೆ ಮತ್ತು ತಲೆಯ ಹಿಂಭಾಗದಲ್ಲಿ ಗಂಭೀರ ಗಾಯಗಳಾಗಿವೆ. ನಗರದ ಧನ್ವಂತ್ರಿ ಆಸ್ಪತ್ರೆಯಲ್ಲಿ ಈಗಾಗಲೇ ಒಂದು ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ. ಗಂಭೀರವಾಗಿರುವ ಕಾರಣಕ್ಕಾಗಿ ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ.
ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








