ಚಿಕ್ಕಮಗಳೂರು:
ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ 22 ವರ್ಷದ ಯುವಕ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಿನ್ನೆ ಸಂಜೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಮೃತನನ್ನು ಅವಿನಾಶ್(22) ಎಂದು ಗುರುತಿಸಲಾಗಿದೆ. ಈತ ಮೂಲತಃ ಮೂಡಿಗೆರೆ ತಾಲೂಕಿನ ಮಾಳಿಗನಾಡು ಗ್ರಾಮದವನು ಎನ್ನಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಗ್ರಾಮದ ಬಿ ಹೊಸಹಳ್ಳಿಯ ಕೆರೆಯಲ್ಲಿ ಅವಿನಾಶ್ ಈಜಲು ಹೋಗಿದ್ದಾಗ ಈ ಘಟನೆ ಸಂಭವಿಸಿದ್ದು, ಯುವಕನ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕನ ಮೃತದೇಹಕ್ಕಾಗಿ ಪೊಲೀಸ್ ಹಾಗೂ ಸ್ಥಳೀಯರು ಹುಡುಕಾಟ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/12/pjimage-2019-12-18T112137.gif)