ಕುವೈತ್‍ನಲ್ಲಿ ಉದ್ಯೋಗ ವಂಚನೆಗೊಳಗಾಗಿದ್ದ 19ಯುವಕರು ಭಾರತಕ್ಕೆ ವಾಪಸ್!!

 ಮಂಗಳೂರು:

      ಕುವೈತ್‌ನಲ್ಲಿ ಉದ್ಯೋಗ ವಂಚನೆಗೆ ಒಳಗಾಗಿ ತೊಂದರೆಗೆ ಸಿಲುಕಿದ್ದ ಭಾರತೀಯ ಸಂತ್ರಸ್ತರ ಪೈಕಿ, ಕರಾವಳಿ ಮೂಲದ 19 ಮಂದಿ ಯುವಕರು ಇಂದು ಬೆಳಗ್ಗೆ ಮರಳಿ ತವರು ಸೇರಿದ್ದಾರೆ.

      ನಷೂದ್ (ಮಂಜೇಶ್ವರ), ವರುಣ್ (ಆಕಾಶ್ ಭವನ), ಕಲಂದರ್ ಶಫೀಕ್ (ಮೂಡುಬಿದಿರೆ), ನಷೂದ್ (ಕೊಪ್ಪ), ರಫೀಕ್ (ಕೊಪ್ಪ), ಯಕೂಬ್ ಮುಲ್ಲಾ ( ಶಿರ್ಸಿ), ಪಾರ್ಲ್ಟ್ರಿಕ್ ಫೆರ್ನಾಂಡಿಸ್ (ಭಟ್ಕಳ), ಜಗದೀಶ್, ಆಶೀಕ್ (ಉಡುಪಿ), ಪಾರ್ಥಿಕ್ (ಉಡುಪಿ), ಮಹಮ್ಮದ್ ಹಸನ್ (ಕೊಲ್ನಾಡು), ಮಹಮ್ಮದ್ ಇಸ್ಮಾಯಿಲ್ (ಕೊಲ್ನಾಡು), ಅಬ್ದುಲ್ ಮಸೀದ್ (ಕಾರ್ಕಳ), ಮಹಮ್ಮದ್ ಸುಹೇಲ್ (ಉಳ್ಳಾಲ), ನೌಫಾಲ್ ಹುಸೈನ್ (ಉಳ್ಳಾಲ), ಮಹಮ್ಮದ್ ಶಕೀರ್ (ಉಳ್ಳಾಲ), ಅಬ್ದುಲ್ ಲತೀಫ್ (ತುಂಬೆ) ಫಯಾಝ್ (ಕುತ್ತಾರ್), ಅಬುಬಕ್ಕರ್ ಸಿದ್ದೀಕ್ (ಬಜಾಲ್) ತವರಿಗೆ ಬಂದಿಳಿದ ಕರಾವಳಿ ಮೂಲದ ಸಂತ್ರಸ್ತ ಯುವಕರು.

      ಈ ಯುವಕರು ಮಂಗಳೂರಿನ ಮಾಣಿಕ್ಯ ಟ್ರಾವೆಲ್ ಏಜೆನ್ಸಿಯ ಮೂಲಕ ಕುವೈಟ್ ಗೆ ತೆರಳಿದ್ದರು. ಕುವೈಟ್ ನಲ್ಲಿ ಈ ಯುವಕರಿಗೆ ಸರಿಯಾದ ಉದ್ಯೋಗ ಲಭಿಸಿರಲಿಲ್ಲ. ಕೆಲವರನ್ನು ಕೆಲಸಕ್ಕೆ ಸೇರಿಸಿಕೊಂಡರೂ ಅವರಿಗೆ ಐದಾರು ತಿಂಗಳ ವೇತನ ಲಭಿಸಿರಲಿಲ್ಲ. ಯುವಕರು ಊಟಕ್ಕೂ ಪರದಾಡುವಂತಹ ಸ್ಥಿತಿ ಎದುರಾಗಿತ್ತು . ಇಂತಹ ಸನ್ನಿವೇಶದಲ್ಲಿ ಯುವಕರು ತಮ್ಮ ಸಂಕಷ್ಟಗಳನ್ನು ಹೇಳಿಕೊಂಡು ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಪ್ರಕಟಿಸಿದ್ದರು.

      ಈ ಘಟನೆಯ ಬಳಿಕ ಅಲ್ಲಿನ ಸರಕಾರಕ್ಕೆ ಯುವಕರ ಸ್ಥಿತಿ ಗತಿಯ ಬಗ್ಗೆ ದೂರು ನೀಡಿ, ಯುವಕರನ್ನು ಮರಳಿ ತಾಯ್ನಾಡಿಗೆ ಕಳುಹಿಸುವಂತೆ ರಾಯಭಾರಿ ಕಚೇರಿಗೆ ಮನವಿ ಮಾಡಲಾಗಿತ್ತು. ಹಾಗೂ ಭಾರತೀಯ ವಿದೇಶಾಂಗ ಇಲಾಖೆಗೂ ಮನವಿ ಮಾಡಲಾಗಿತ್ತು.
ಸರಕಾರಿ ನೆಲೆಯ ಪ್ರಯತ್ನ ಕೈಗೂಡದ ಹಿನ್ನೆಲೆಯಲ್ಲಿ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರು ಕುವೈಟ್ ನಲ್ಲಿರುವ ತನ್ನ ಸ್ನೇಹಿತರನ್ನು ಸಂಪರ್ಕಿಸಿ ಈ 19 ಯುವಕರು ಮರಳಿ ಬರಲು ಬೇಕಾದ ಪ್ರಯಾಣ ವೆಚ್ಚವನ್ನು ಭರಿಸಿವ ವ್ಯವಸ್ಥೆ ಮಾಡಿದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಈ ಯುವಕರು ಮಂಗಳೂರು ತಲುಪಿದ್ದಾರೆ.

      ಸದ್ಯ 19 ಮಂದಿ ಯುವಕರು ಮರಳಿ ಮಂಗಳೂರು ಸೇರಿದ್ದಾರೆ. ಇಂದು ಬೆಳಿಗ್ಗೆ ಮಂಗಳೂರಿನಲ್ಲಿ ಬಂದಿಳಿದ ಈ ಯುವಕರನ್ನು ಜಿಲ್ಲಾ ಬಿಜೆಪಿ ಉಪಾಧ್ಯಾಕ್ಷ ರವಿಶಂಕರ್ ಮಿಜಾರ್ ಸ್ವಾಗತಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap