ದಾವಣಗೆರೆ :
ಡಿಸೆಂಬರ್ ವರೆಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಸಚಿವರು, ಕೊರೊನಾ ಮೂರನೇ ಅಲೆ ಭೀತಿ ಎದುರಾಗಿದೆ. ಹೀಗಾಗಿ ಸಧ್ಯಕ್ಕೆ ಚುನಾವಣೆಗಳು ಇರುವುದಿಲ್ಲ. ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗೆ ಡಿಸೆಂಬರ್ ವರೆಗೂ ಚುನಾವಣೆ ನಡೆಸದಿರಲು ತೀರ್ಮಾನಿಸಲಾಗಿದೆ . ಸೋಮವಾರ ಸಂಜೆ ನಾಲ್ಕು ಗಂಟೆಗೆ ರಾಜ್ಯ ಸಚಿವ ಸಂಪುಟದ ಸಭೆ ನಡೆಯಲಿದೆ. ಅಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ