ಹಾಸನ :
ಲೋಕಸಭೆ ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಗೆ ಬಿಗ್ ಶಾಕ್ ಆಗಿದ್ದು, ಇಂದು ಮಾಜಿ ಸಚಿವ ಕಾಂಗ್ರೆಸ್ ಗೆ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿದೆ.
ಹಾಸನದ ಅರಸೀಕೆರೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಈ ಬಗ್ಗೆ ಎ.ಮಂಜು ಅವರು ಘೋಷಿಸಿದ್ದಾರೆ ಎನ್ನಲಾಗಿದ್ದು, ಹಾಸನ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ಅಸಮಾಧಾನವನ್ನು ಹೊರಹಾಕಿರುವ ಎ. ಮಂಜು ಹಾಸನದ ಪ್ರಬಲ ರಾಜಕಾರಣಿ. ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ಮುಂದಾಗಿದ್ದ ಕಾಂಗ್ರೆಸ್- ಜೆಡಿಎಸ್ನಿಂದಾಗಿ ಹಾಸನ ಕ್ಷೇತ್ರ ಜೆಡಿಎಸ್ ಪಾಲಾಗಿತ್ತು.
ಹಾಸನದಿಂದ ದೇವೇಗೌಡರೇ ಸ್ಪರ್ಧಿಸುವುದಾದರೆ ಮಾತ್ರ ಬೆಂಬಲ ನೀಡುವುದಾಗಿ ಹೇಳಿಕೊಂಡು ಬಂದಿದ್ದ ಎ. ಮಂಜು, ಬೇರೆ ಯಾರಾದರೂ ಸ್ಪರ್ಧಿಸಿದರೆ ತಮ್ಮ ದಾರಿಯನ್ನು ತಾವು ನೋಡಿಕೊಳ್ಳುವುದಾಗಿ ಹೇಳಿದ್ದರು. ಈಗ ಹಾಸನದಿಂದ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಕಣಕ್ಕೆ ಇಳಿದಿರುವುದರಿಂದ ಬಿಜೆಪಿ ಸೇರಿ ಪ್ರಜ್ವಲ್ ವಿರುದ್ಧ ಎ. ಮಂಜು ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.
ಮಂಜು ಜೊತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್ ಕೂಡ ಕಾಂಗ್ರೆಸ್ಸಿಗೆ ಗುಡ್‍ಬೈ ಹೇಳುವ ಸಾಧ್ಯತೆಯಿದೆ. ಹಾಗೆಯೇ ಕಾಂಗ್ರೆಸ್‍ನಿಂದ ಬಿಜೆಪಿಗೆ ಎ. ಮಂಜು ಜಿಗಿಯಲಿದ್ದಾರೆ.
ಮಂಜು ಬಿಜೆಪಿಗೆ ಸೇರಿ ಹಾಸನದಲ್ಲಿ ಕಾಂಗ್ರೆಸ್ ಶಾಕ್ ನೀಡಲು ನಿರ್ಧರಿಸಿದ್ದಾರೆ. ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಎ.ಮಂಜು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
