ಬೆಂಗಳೂರು:
2 ದಿನಗಳಿಂದ ರಾಜಧಾನಿಯಲ್ಲಿ ಸಂಭವಿಸಿದ ಮಳೆಯಿಂದಾಗಿ 300 ಕ್ಕೂ ಹೆಚ್ಚಯ ಮರಗಳ ಮಾರಣಹೋಮವಾಗಿದ್ದು, ಇವುಗಳನ್ನು ತೆರವುಗೊಳಿಸುವ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯಿಂದ ಉಂಟಾದ ಹಾನಿಯ ಬಗ್ಗೆ ಮಾಹಿತಿ ನೀಡಲು ಪ್ರತ್ಯೇಕ ತಂಡ ರಚಿಸಲಾಗಿದೆ. ತಗ್ಗು ಪ್ರದೇಶದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಲು ವಲಯವಾರು ತಂಡಗಳು ಕೆಲಸ ಮಾಡುತ್ತಿವೆ ಎಂದರು.
ರಾಜಕಾಲುವೆ ಒತ್ತುವರಿಗೆ ಕಠಿಣ ಕ್ರಮಕೈಗೊಂಡಿದ್ದು, ಸರ್ವೆ ಮಾಡಲು ಸೂಚನೆ ನೀಡಲಾಗಿದೆ. ಸರ್ವೆ ಮಾಡುವವರ ಕೊರತೆಯಿಂದ ಕಂದಾಯ ಇಲಾಖೆಯಿಂದ ತಾತ್ಕಾಲಿಕವಾಗಿ ಸರ್ವೆ ಮಾಡುವವರನ್ನು ನೇಮಕ ಮಾಡಲಾಗಿದೆ. ಗುಂಡಿ ಮುಚ್ಚಲು ಹೈಕೋರ್ಟ್ ಆದೇಶನೀಡಿದ್ದು, ಈ ಕೆಲಸವೂ ತ್ವರಿತವಾಗಿ ನಡೆಯುತ್ತಿದೆ. ಆದರೆ ಮಳೆಯಿಂದ ತೊಂದರೆಯಾಗುತ್ತಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ