ಬೆಂಗಳೂರು:
ಇತ್ತೀಚೆಗಷ್ಟೇ ಬಿಜೆಪಿ ಸೇರಿರುವ ಅನರ್ಹ ಶಾಸಕರಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್ ಮತ್ತು ಮುನಿರತ್ನ ಇಂದು ಆದಿಚುಂಚನಗಿರಿ ಶ್ರೀಗಳನ್ನು ಭೇಟಿಯಾದರು.
ಡಿಸೆಂಬರ್ 5ರಂದು ಹದಿನೈದು ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಸ್.ಟಿ ಸೋಮಶೇಖರ್ ಕಣಕ್ಕಿಳಿದಿದ್ದಾರೆ. ಕೆ.ಆರ್ ಪುರಂ ಬಿಜೆಪಿ ಅಭ್ಯರ್ಥಿಯಾಗಿ ಭೈರತಿ ಬಸವರಾಜ್ ಸ್ಪರ್ಧಿಸಿದ್ದಾರೆ. ಈ ಹಿನ್ನೆಲೆ ನಿರ್ಮಲಾನಂದ ಶ್ರೀಗಳನ್ನ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ನಂತರ ಮಾತನಾಡಿದ ಎಸ್.ಟಿ.ಸೋಮಶೇಖರ್, ಎಲ್ಲವೂ ಒಳ್ಳೆಯದಾಗುತ್ತೆ ಎಂದು ಶ್ರೀಗಳು ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸುವೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ