ಬಿಎಸ್‍ವೈ – ಬಿ.ಎಲ್.ಸಂತೋಷ್ ಭೇಟಿ : ಸಂಪುಟ ವಿಸ್ತರಣೆ ಕುರಿತು ಚರ್ಚೆ!!

ಬೆಂಗಳೂರು :

      ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.

     ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ನಿವಾಸಕ್ಕೆ ಭೇಟಿಯಾದ ಬಿ.ಎಲ್.ಸಂತೋಷ್ ಸಚಿವ ಸಂಪುಟ ವಿಸ್ತರಣೆ ಕುರಿತು   ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

     ಉಪಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ಸಿಎಂ ಅವರನ್ನು ಭೇಟಿಯಾದ ಸಂತೋಷ್, ಸೋತವರಿಗೆ ಸಚಿವ ಸ್ಥಾನ ನೀಡುವ ಕುರಿತು ಮತ್ತು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ. ಜೊತೆಗೆ ಹೈಕಮಾಂಡ್ ಭೇಟಿಗೆ ತೆರಳಿ ಈ ಬಗ್ಗೆ ಮಾತುಕತೆ ನಡೆಸುವ ಸಂಬಂಧ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

     ಸಚಿವ ಸಂಪುಟ ವಿಸ್ತರಣೆ, ಕೆಲವು ಸಚಿವರ ಖಾತೆಗಳು ಬದಲಾವಣೆ ಹಾಗೂ ಉಪಮುಖ್ಯಮಂತ್ರಿ ಸೃಷ್ಟಿ ಕುರಿತು ಎದ್ದಿರುವ ಊಹಾಫೋಹಗಳ ನಡುವೆಯೇ ಬಿಜೆಪಿಯ ಇಬ್ಬರು ಪ್ರಬಲ ನಾಯಕರ ಮಾತುಕತೆ ರಾಜಕೀಯ ವಲಯದಲ್ಲೂ ಕುತೂಹಲ ಕೆರಳಿಸಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link