ಸಿನಿಮಾ, ಟಿವಿ ಧಾರಾವಾಹಿಗಳ ಚಿತ್ರೀಕರಣ ಪುನರಾರಂಭ!!

ನವದೆಹಲಿ:

     ಕೊರೊನಾವೈರಸ್‌ ಭೀತಿಯಿಂದಾಗಿ ಸ್ಥಗಿತಗೊಳಿಸಲಾಗಿದ್ದ ಸಿನಿಮಾ ಹಾಗೂ ಧಾರಾವಾಹಿಗಳ ಚಿತ್ರೀಕರಣ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್ ಇಂದಿಲ್ಲಿ ಪ್ರಕಟಿಸಿದ್ದಾರೆ.

      ಭಾರತದ COVID-19 ಪ್ರಕರಣವು ಕಳೆದ 30 ಗಂಟೆಗಳಲ್ಲಿ 69,239 ಹೊಸ ಪ್ರಕರಣಗಳು ಮತ್ತು 912 ಸಾವುಗಳೊಂದಿಗೆ 30 ಲಕ್ಷ ದಾಟಿದೆ. 7,07,668 ಸಕ್ರಿಯ ಪ್ರಕರಣಗಳು, ಗೃಹ ಸಚಿವಾಲಯ ಮತ್ತು ಆರೋಗ್ಯ ಸಚಿವಾಲಯದೊಂದಿಗೆ ಸಮಾಲೋಚಿಸಿದ ನಂತರ, ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು (ಎಸ್‌ಒಪಿ) ದೃಡಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ. 

     ಶೂಟಿಂಗ್‌ ಸೆಟ್‌ಗೆ ಬರುವ ಮೊದಲು ಥರ್ಮಲ್ ಸ್ಕ್ರೀನಿಂಗ್ ನಡೆಸಬೇಕು. ರೋಗದ ಯಾವುದೇ ಲಕ್ಷಣವಿಲ್ಲದವರು ಮಾತ್ರ ಸೆಟ್ ಒಳಗೆ ಹೋಗಬಹುದು. ಶೀಘ್ರವೇ ಈ ಕುರಿತು ಮಾರ್ಗಸೂಚಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದು, ಅಭಿನಯಿಸುವವರು ಅಲ್ಲದೇ, ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಪಾಲನೆ ಮಾಡಬೇಕು ಎಂದಿದ್ದಾರೆ.

    ಆರೋಗ್ಯ ಸಚಿವಾಲಯದ ಜೊತೆಗೆ ಸಮಾಲೋಚಿಸಿ ಮಾರ್ಗಸೂಚಿ ಅಭಿವೃದ್ಧಿಪಡಿಸಿರುವುದಾಗಿ ಸಚಿವರು ಹೇಳಿದ್ದಾರೆ.

     ಕೊರೊನಾವೈರಸ್ ದೇಶದಲ್ಲಿ ಕಾಣಿಸಿಕೊಂಡ ಬಳಿಕ ಸಿನಿಮಾ, ಟಿವಿ ಧಾರವಾಹಿಗಳ ಚಿತ್ರೀಕರಣವನ್ನು ರದ್ದುಪಡಿಸಲಾಗಿತ್ತು. ಮಾರ್ಗಸೂಚಿ ಬಿಡುಗಡೆಯಿಂದ ಸಿನಿಮಾ, ಟಿವಿ ಧಾರಾವಾಹಿಗಳು ಪುನರ್ ಆರಂಭಗೊಳ್ಳುವುದರೊಂದಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ಭರವಸೆ ಹೊಂದಿರುವುದಾಗಿ ಸಚಿವರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link