ಹುತಾತ್ಮ ಯೋಧ ಗುರು ಸ್ಮಾರಕ ನಿರ್ಮಾಣಕ್ಕೆ 25 ಲಕ್ಷ ಬಿಡುಗಡೆ!!

ಬೆಂಗಳೂರು : 

      ಪುಲ್ವಾಮಾ ಉಗ್ರ ದಾಳಿಯಲ್ಲಿ ಹುತಾತ್ಮರಾದ ಮದ್ದೂರಿನ ಸಿಆರ್ ಪಿಎಫ್ ಯೋಧ ಹೆಚ್.ಗುರು ಅವರ ಸ್ಮಾರಕ ನಿರ್ಮಾಣಕ್ಕೆ ಆದೇಶಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 25 ಲಕ್ಷ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ.

     ಈ ಕುರಿತಂತೆ ಆರ್ಥಿಕ ಇಲಾಖೆಗೆ ಪತ್ರ ಬರೆದು ತಿಳಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಹೆಚ್.ಗುರು ಅವರ ತ್ಯಾಗ ಬಲಿದಾನ ಮುಂದಿನ ಪೀಳಿಗೆಗೆ ಆದರ್ಶವಾಗಬೇಕು. ಹೀಗಾಗಿ ಅವರ ಸ್ಮಾರಕ ನಿರ್ಮಿಸುವುದು ಅಗತ್ಯವಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದು, ಮಂಡ್ಯ ಜಿಲ್ಲಾಧಿಕಾರಿಗಳಿಗೆ 25 ಲಕ್ಷ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ.

     ಇತ್ತೀಚೆಗೆ ಹುತಾತ್ಮ ವೀರ ಯೋಧ ಗುರು ಅವರ ಪತ್ನಿ ಮಂಡ್ಯ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಗುರು ಸ್ಮಾರ ನಿರ್ಮಾಣದ ಬಗ್ಗೆ ಕೋರಿಕೊಂಡಿದ್ದರು. ಈ ಮನವಿಯನ್ನು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳು ಪತ್ರದ ಮೂಲಕ ತಿಳಿಸಿದ್ದರು. ಇದರ ಬೆನ್ನಲ್ಲೇ ಇದೀಗ ಗುರು ಸ್ಮಾರಕ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 25 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ