ಬೆಂಗಳೂರು:
ಕರ್ನಾಟಕ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಹೆಸರಿಸಿದೆ.
@INCIndia has announced
1. Shri. M C Venugopal
2. Shri. Nazeer Ahmed are the candidates for upcoming MLC by-election in Karnataka.— Karnataka Congress (@INCKarnataka) September 23, 2018
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಸಿಎಂ ಜಿ ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕದ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರ ಜತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಭೆ ನಡೆಸಿ, ಅಂತಿಮವಾಗಿ ಹೆಸರುಗಳನ್ನು ಘೋಷಿಸಲಾಗಿದೆ.
ಸೆ.25ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅ.4ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅಂದು ಸಂಜೆ 5 ರಿಂದ ಮತ ಎಣಿಕೆ ಆರಂಭವಾಗಲಿದ್ದು, ಅ.6ರೊಳಗೆ ಪ್ರಕ್ರಿಯೆ ಮುಗಿಯಲಿದೆ.
ನಿವೇದಿತ್ ಆಳ್ವಾ, ಯು. ಬಿ ವೆಂಕಟೇಶ್ ಅವರ ಹೆಸರುಗಳು ಕೂಡಾ ಕೇಳಿ ಬಂದಿತ್ತು. ಇವರಲ್ಲದೆ, ಮುಖ್ಯಮಂತ್ರಿ ಚಂದ್ರು, ಪ್ರಕಾಶ್ ರಾಥೋಡ್, ವಿ.ಆರ್. ಸುದರ್ಶನ್, ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವರ ಹೆಸರು ಕೂಡ ಕೇಳಿಬಂದಿತ್ತು.
ನಾಮಪತ್ರ ಸಲ್ಲಿಕೆಗೆ ಸೋಮವಾರ(ಸೆಪ್ಟೆಂಬರ್ 24) ಕೊನೆ ದಿನವಾಗಿದೆ. ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ, ಭಾನುವಾರದಂದೇ ಪ್ರಕಟಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ