ಬೆಂಗಳೂರು:
ಅಕ್ಟೋಬರ್ 4 ರಂದು ನಡೆಯಲಿರುವ ವಿಧಾನಸಭೆಯಿಂದ ವಿಧಾನಪರಿಷತ್ತಿನ ಉಪ ಚುನಾವಣೆಗೆ ಕಾಂಗ್ರೆಸ್ ನಿಂದ ಇಬ್ಬರು ಅಭ್ಯರ್ಥಿಗಳು ಇಂದು(ಸೋಮವಾರ) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಡಿಸಿಎಂ ಜಿ.ಪರಮೇಶ್ವರ್, ಶಾಸಕರಾದ ಕೆ.ಎಸ್ ಈಶ್ವರಪ್ಪ, ವಿ.ಸೋಮಣ್ಣ ಅವರಿಂದ ತೆರವಾಗಿರುವ ಮೂರು ಸ್ಥಾನಗಳ ಪೈಕಿ ಕಾಂಗ್ರೆಸ್ ಎರಡು ಸ್ಥಾನಗಳಿಗೆ ಸ್ಪರ್ಧಿಸಲು ತೀರ್ಮಾನಿಸಿದ್ದು, ಜೆಡಿಎಸ್ಗೆ ಒಂದು ಸ್ಥಾನ ಬಿಟ್ಟುಕೊಟ್ಟಿದೆ.
ತನಗೆ ಸಿಕ್ಕಿರುವ ಎರಡು ಸ್ಥಾನಗಳಿಗೆ ಎಂ.ಸಿ. ವೇಣುಗೋಪಾಲ್ ಹಾಗೂ ನಜೀರ್ ಅಹಮದ್ ಅವರ ಹೆಸರನ್ನು ಅಂತಿಮಗೊಳಿಸಿದ್ದ ಕಾಂಗ್ರೆಸ್ ಆ ಇಬ್ಬರೂ ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಸಲ್ಲಿಕೆ ಮಾಡಿಸಿದೆ.
ಡಿಸಿಎಂ ಜಿ.ಪರಮೇಶ್ವರ್, ಶಾಸಕರಾದ ಕೆ.ಎಸ್ ಈಶ್ವರಪ್ಪ, ವಿ.ಸೋಮಣ್ಣ ಅವರಿಂದ ತೆರವಾಗಿರುವ ಮೂರು ಸ್ಥಾನಗಳ ಪೈಕಿ ಕಾಂಗ್ರೆಸ್ ಎರಡು ಸ್ಥಾನಗಳಿಗೆ ಸ್ಪರ್ಧಿಸಲು ತೀರ್ಮಾನಿಸಿದ್ದು, ಜೆಡಿಎಸ್ಗೆ ಒಂದು ಸ್ಥಾನ ಬಿಟ್ಟುಕೊಟ್ಟಿದೆ.
ಬಳಿಕ ಮಾಧ್ಯಮಗಳೊಂದಿಗೆ ಮಾಡಿದ ಉಪ ಮುಖ್ಯಮಂತ್ರಿ ಪರಮೇಶ್ವರ್, ನಮ್ಮ ಪಕ್ಷದಿಂದ ಇಬ್ಬರು ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ನಿಂದ ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬಿಜೆಪಿಯವರು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಮೈತ್ರಿಕೂಟದ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ. ಅದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ಸಚಿವರಾದ ಡಿ.ಕೆ. ಶಿವಕುಮಾರ್, ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಹಲವು ನಾಯಕರು ಈ ವೇಳೆ ಉಪಸ್ಥಿತರಿದ್ದರು.