#Justice_For_Madhu : ಆತ್ಮಹತ್ಯೆಯಲ್ಲ ರೇಪ್ & ಮರ್ಡರ್!?

ರಾಯಚೂರು: 

Image result for #JusticeForMadhu

     ನಗರದ ನವೋದಯ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮಧು ಪತ್ತಾರ (23) ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಂಘಟನೆಗಳ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.

      ರಾಜ್ಯವ್ಯಾಪಿ ಗಮನ ಸೆಳೆದಿರುವ ಈ ಪ್ರಕರಣ ಇದೀಗ #Justice_For_Madhu ಹ್ಯಾಷ್‌ಟ್ಯಾಗ್‌ನೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿಯೂ ಸದ್ದು ಮಾಡುತ್ತಿದೆ.

      ಸೋಮವಾರ ನಗರದ ಮಾಣಿಕಪ್ರಭು ದೇವಸ್ಥಾನದ ಹಿಂಭಾಗದ ಬೆಟ್ಟದ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವಿನ ಪ್ರಕರಣ ಈಗ ಟ್ವಿಸ್ಟ್ ಪಡೆದಿದೆ. ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಎಂದು ದಾಖಲಾಗಿದ್ದ ಪ್ರಕರಣ ಈಗ ಅತ್ಯಾಚಾರವೆಸಗಿ, ಕೊಲೆ ಎಂದು ದಾಖಲಾಗಿದೆ.

      ಮೃತ ವಿದ್ಯಾರ್ಥಿನಿ ಮಧು ತಾಯಿ ರೇಣುಕಾದೇವಿ ನೀಡಿದ ದೂರಿನ ಮೇರೆಗೆ ಪೊಲೀಸರು ಅತ್ಯಾಚಾರ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುದರ್ಶನ ಯಾದವ್ ಎಂಬುವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.

      ಆರೋಪಿ ಸುದರ್ಶನ್ ಮಧು ಜೊತೆ ತುಂಬಾ ದಿನಗಳಿಂದ ಸ್ನೇಹದಲ್ಲಿದ್ದ ಹಾಗೂ ಇವನ ಮೇಲೆಯೇ ಮಧು ಪೋಷಕರಿಗೆ ಸಂಶಯವಿತ್ತು. ಈ ಅನುಮಾನದ ಮೇಲೆಯೇ ಪೊಲೀಸರು ಅವನನ್ನು ಶವ ಪತ್ತೆಯಾದ ದಿನವೇ ವಶಕ್ಕೆ ಪಡೆದಿದ್ದರು. ಆದ್ರೆ ಬಹಿರಂಗಗೊಳಿಸಿರಲಿಲ್ಲ. ಪೊಲೀಸರ ಈ ವರ್ತನೆ ವಿದ್ಯಾರ್ಥಿ ಸಮುದಾಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

      ಇನ್ನೂ ಎರಡು ಮೂರು ದಿನದಲ್ಲಿ ಮರಣೋತ್ತರ ಪರೀಕ್ಷೆಯ ವರದಿ ಬರಲಿದ್ದು ಸತ್ಯಾಂಶ ಹೊರಬರಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Image may contain: 7 people, people sitting and indoor

      ‘ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ದೊರಕಿಸಬೇಕು’ ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಬರೆದ ಮನವಿಯನ್ನು ವಿದ್ಯಾರ್ಥಿಗಳು ತಹಶೀಲ್ದಾರ್‌ಗೆ ಸಲ್ಲಿಸಿದ್ದಾರೆ. ‘ಈ ಪ್ರಕರಣದಿಂದ ಜನರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ತಪ್ಪಿತಸ್ಥರನ್ನು ಉಗ್ರ ಶಿಕ್ಷೆಗೆ ಗುರಿಪಡಿಸುವ ಮೂಲಕ ಇಂತಹ ಅನಾಹುತಗಳು ಮುಂದೆ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ದಯೆ–ದಾಕ್ಷಿಣ್ಯ ಇಲ್ಲದೇ ಶಿಕ್ಷೆ ನೀಡಬೇಕು’ ಎಂದು ರಾಯಚೂರಿನ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

      ರಾಯಚೂರಿನಲ್ಲಿ ಯುವತಿಯ ಅನುಮಾಸ್ಪದ ಸಾವಿನ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿಯೂ ಸದ್ದು ಮಾಡಿದೆ. #Justice_For_Madhu ಹ್ಯಾಷ್‌ಟ್ಯಾಗ್‌ ಜೊತೆಗೆ ಹಲವರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ‘ಚುನಾವಣೆಯ ಸುದ್ದಿಗಳಲ್ಲಿ ಈ ಸುದ್ದಿ ಮುಚ್ಚಿ ಹೋಗಬಾರದು’ ಎಂದು ಹಲವರು ಆಗ್ರಹಿಸುತ್ತಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link