ಬೆಂಗಳೂರು :
ಪ್ರಕಾಶ್ ರಾಥೋಡ್ ಅವರು ಇಂದು ವಿ.ಪರಿಷತ್‌ನಲ್ಲಿ ತಮ್ಮ ಮೊಬೈಲ್ ಅನ್ನು ತೆಗೆದುಕೊಂಡು ಗ್ಯಾಲರಿಗಳನ್ನು ನೋಡುತ್ತಿದ್ದ ವೇಳೇಯಲ್ಲಿ ಆಶ್ಲೀಲವಾದ ಫೋಟೋಗಳನ್ನು ನೋಡುತ್ತಿದ್ದರು ಎಂದು ಸುದ್ದಿವಾಹಿನಿಗಳು ವರದಿ ಮಾಡಿವೆ.
ಈ ಕುರಿತು ಸ್ಪಷ್ಟನೆ ನೀಡಿರುವ ಅವರು, ನಾನು ನೂರಾರು ಗ್ರೂಪ್ಗಳಲ್ಲಿ ಇದ್ದೇನೆ. ಸಾವಿರಾರು ವಿಡಿಯೋ ಇವೆ. ಹೀಗಾಗಿ ಸ್ಟೋರೇಜ್ ಫುಲ್ ಆಗಿತ್ತು. ಅದನ್ನ ಡಿಲೀಟ್ ಮಾಡ್ತಿದ್ದೆ. ಅದು ಅಶ್ಲೀಲ ವಿಡಿಯೋನಾ? ಅನ್ನೋದೂ ನನಗೆ ಗೊತ್ತಿಲ್ಲ.. ನಾನು ಯಾವುದನ್ನೂ ನೋಡದೆ ಬಂದಿರುವ ಮೆಸೇಜ್ ಮತ್ತು ವಿಡಿಯೋ ಡಿಲೀಟ್ ಮಾಡ್ತಿದ್ದೆ ಎಂದು ಹೇಳಿದ್ದಾರೆ.
ಈ ಹಿಂದೆ ಸದನಲ್ಲಿ ನೀಲಿ ಚಿತ್ರವನ್ನು ನೋಡುತ್ತಿದ್ದವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದರು ಕೂಡ, ಇದು ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನು ಮೂಡಿಸಿತ್ತು. ನಿಯಮಗಳ ಪ್ರಕಾರ, ಅಧಿವೇಶನದಲ್ಲಿ ಸದಸ್ಯರು ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ. ಆದರೂ ಮೊಬೈಲ್ ಬಳಸಿ ಶಾಸಕರು ನಿಯಮವನ್ನು ಉಲ್ಲಂಘಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ