ಬೆಂಗಳೂರು:
2018-19ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಉಡುಪಿ ಜಿಲ್ಲೆ 92.20% ಪಡೆಯುವ ಮೂಲಕ ಪ್ರಥಮ ಸ್ಥಾನ ತನ್ನದಾಗಿಸಿಕೊಂಡಿದೆ.
ಇನ್ನು 90.91% ಪಡೆಯುವ ಮೂಲಕ ದ್ವಿತೀಯ ಸ್ಥಾನವನ್ನು ದಕ್ಷಿಣ ಕನ್ನಡ ಜಿಲ್ಲೆ, 83.31% ಪಡೆಯುವ ಮೂಲಕ ತೃತೀಯ ಸ್ಥಾನ ಕೊಡಗು ಜಿಲ್ಲೆಗೆ ಸಿಕ್ಕಿದೆ. 51.42 % ಪಡೆದ ಚಿತ್ರದುರ್ಗ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.
ಒಟ್ಟು ಶೇ. 61.68 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಪ್ರತಿ ಬಾರಿಯಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಕನ್ನಡ ಮಾಧ್ಯಮದಲ್ಲಿ – ಶೇ. 55.08, ಆಂಗ್ಲ ಮಾಧ್ಯಮದಲ್ಲಿ – ಶೇ. 66.90 ಫಲಿತಾಂಶ ದಾಖಲಾಗಿದೆ. 80 ಕಾಲೇಜುಗಳಲ್ಲಿ ಶೇ. 100 ಫಲಿತಾಂಶ ದಾಖಲಾಗಿದ್ದು, 98 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. 94 ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿಯೂ ಶೂನ್ಯ ಫಲಿತಾಂಶ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ