ಮೈಸೂರು:
ತೀವ್ರ ಹಲ್ಲೆಗೊಳಗಾದ ಶಾಸಕ ತನ್ವೀರ್ ಸೇಠ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಕತ್ತಿನ ಭಾಗದಲ್ಲಿ ಇರಿತವಾದ ಕಾರಣ ಕತ್ತು ಮತ್ತು ಹೃದಯವನ್ನು ಸಂಪರ್ಕಿಸುವ ಎರಡು ನರಗಳು ತುಂಡಾಗಿವೆ ಎಂದು ವರದಿಯಾಗಿದೆ. ಸತತ ಐದು ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ ನರಗಳನ್ನು ಮರುಜೋಡಣೆ ಮಾಡುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ.ಆದರೆ, ಕುತ್ತಿಗೆಯಲ್ಲಿರುವ ರಕ್ತನಾಳ, ನರಗಳಿಗೆ ಪೆಟ್ಟಾಗಿದೆ. ಕುತ್ತಿಗೆ ಭಾಗವು ಮೆದುಳಿಗೆ ಮತ್ತು ಹೃದಯಕ್ಕೆ ಸಂಬಂಧಿಸಿದೆ. ಆದ್ದರಿಂದ ಅವರ ಅರೋಗ್ಯ ಸ್ಥಿತಿ ಸದ್ಯಕ್ಕೆ ಗಂಭೀರ ವಾಗಿದೆ. ಇನ್ನು 48 ಗಂಟೆಗಳ ಕಾಲ ಏನನ್ನು ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಕೊಲಂಬಿಯಾ ಏಷಿಯಾ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ತನ್ವೀರ್ ಅವರನ್ನು ಬೆಳಗ್ಗಿನಿಂದಲೇ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ.
ಸಂಬಂಧಿಗಳ ಭೀಗರ ಔತಣಕೂಟದಲ್ಲಿ ಭಾಗಿಯಾಗಿ ನಂತರ ಸಂಗೀತ ಕಾರ್ಯಕ್ರಮ ವೀಕ್ಷಿಸುತ್ತಿದ್ದ ವೇಳೆ ತನ್ವೀರ್ ಸೇಠ್ ಮೇಲೆ ದಾಳಿ ನಡೆದಿದೆ. ದಾಳಿ ನಡೆಸಿ ಪರಾರಿಯಾಗುತ್ತಿದ್ದ ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ನಂತರ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸೇಠ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ