ಬೆಂಗಳೂರು:
ಹೊರಗಡೆ ಹೋಗುತ್ತೇನೆ ಎಂದು ಹೇಳಿ ಹೋಗಿ ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಹೊರವಲಯ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಜಿ ಸೊಣ್ಣೇನಹಳ್ಳಿ ನಿವಾಸಿ ರಹೀಂ ಮೃತ ದುರ್ದೈವಿ. ಈತ ಜನವರಿ 7ರಂದು ಮನೆಯಿಂದ ಹೊರಗಡೆ ಹೋಗುತ್ತಿದ್ದೇನೆ ಎಂದು ತಾಯಿಗೆ ತಿಳಿಸಿದ್ದಾನೆ. ಬಳಿಕ ಎರಡು ದಿನವಾದರೂ ಆತ ಮನೆಗೆ ವಾಪಸ್ ಬಂದಿರಲಿಲ್ಲ, ಬಳಿಕ ನಿರ್ಜನ ಪ್ರದೇಶದಲ್ಲಿ ಆತನ ಶವವಾಗಿ ಪತ್ತೆಯಾಗಿದ್ದಾನೆ.
ರಹೀಂ ಎರಡು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ, ಯುವತಿಗೆ ಅವರ ಪೋಷಕರು ಬೇರೊಬ್ಬ ಯುವಕನ ಜೊತೆ ವಿವಾಹ ನಿಶ್ಚಯ ಮಾಡಿದ್ದರು. ಇದರಿಂದ ರಹೀಂ ಸಾಕಷ್ಟು ನೊಂದಿದ್ದನು.
ಕೊನೆಗೆ ಯುವತಿಯನ್ನು ಬಿಟ್ಟಿರಲಾರದೇ ರಹೀಂ ಪದೇ ಪದೇ ಆಕೆಗೆ ಫೋನ್ ಮಾಡಿ ಭೇಟಿಯಾಗಲು ಪ್ರಯತ್ನಿಸುತ್ತಿದ್ದನು. ಇದರಿಂದ ಯುವತಿಯ ಸಂಬಂಧಿಕರೇ ನನ್ನ ಮಗನನ್ನು ಕೊಲೆ ಮಾಡಿಸಿದ್ದಾರೆ ಎಂದು ರಹೀಂ ಪೋಷಕರು ಆರೋಪ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ