ಬೆಂಗಳೂರು
ಭಾರತದಲ್ಲಿ ಫ್ರಾನ್ಸ್ ರಾಯಭಾರಿಯಾಗಿರುವ ಅಲೆಗ್ಸಾಂಡರ್ ಜಿಗ್ಲೇರ್ ಅವರು ನಾಳೆಯಿಂದ ಎರಡು ದಿನಗಳ ಕಾಲ ನಡೆಯಲಿರುವ ” ಬೆಂಗಳೂರು ಟೆಕ್” ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ತಮ್ಮ ಬೆಂಗಳೂರು ಭೇಟಿ ಸಂದರ್ಭದಲ್ಲಿ ಅವರು ಭಾರತ – ಫ್ರಾನ್ಸ್ ವ್ಯಾಪಾರ ತಂತ್ರಜ್ಞಾನ ವಲಯದ ಪ್ರಮುಖರ ಜತೆ ಸಮಾಲೋಚನೆ ನಡೆಸಲಿದ್ದಾರೆ.
ನಾಳೆ ಅಲೆಗ್ಸಾಂಡರ್ ಜಿಗ್ಲೇರ್ ಅವರು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಅಜೀಂ ಪ್ರೇಮ್ ಜಿ ಅವರಿಗೆ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಪುರಸ್ಕಾರ ” ನೈಟ್ ಆಫ್ ದಿ ಲೆಗೈನ್ ಆಫ್ ಹಾನರ್ ” ನೀಡಿ ಗೌರವಿಸಲಿದ್ದಾರೆ. ಭಾರತದಲ್ಲಿ ಮಾಹಿತಿ ತಂತ್ರಜ್ಞಾನ ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ನೀಡಿದ ಕೊಡುಗೆ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ಮತ್ತು ವಿಶ್ವವಿದ್ಯಾಲಯದ ಮೂಲಕ ಜನಹಿತ ಕಾರ್ಯಗಳಲ್ಲಿ ತೊಡಗಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
