ಬೆಂಗಳೂರು:
ಕೇರಳದ ಪ್ರಸಿದ್ಧ ಯಾತ್ರಾ ಸ್ಥಳವಾದ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ತೆರಳಯುವ ಭಕ್ತರಿಗೆ ರಾಜ್ಯ ಸಾರಿಗೆ ಸಂಸ್ಥೆ ದೊಡ್ಡ ಶಾಕ್ ನೀಡಿದೆ .
ಶಬರಿಮಲೆ ದೇವಸ್ಥಾನಕ್ಕೆ 10ರಿಂದ 50 ವರ್ಷದೊಳಗಿನ ಮಹಿಳೆಯರು ಪ್ರವೇಶಿಸುವಂತಿಲ್ಲ ಎಂಬ 800 ವರ್ಷಗಳ ಸಂಪ್ರದಾಯವನ್ನು ಇಬ್ಬರು ಮಹಿಳೆಯರು ಉಲ್ಲಂಘಿಸಿದ ಹಿನ್ನಲೆಯಲ್ಲಿ ಕೇರಳದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದ ಹಿನ್ನಲೆಯಲ್ಲಿ ರಾಜ್ಯದಿಂದ ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಿದೆ.
ಇಬ್ಬರು ಮಹಿಳೆಯರು ದೇಗುಲ ಪ್ರವೇಶಿಸಿದ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿರುವ ಹಲವು ಸಂಘಟನೆಗಳು ಬಂದ್ ಗೆ ಕರೆ ನೀಡಿದೆ. ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಅಧಿಕಾರಿಗಳು ಕೇರಳ ರಾಜ್ಯಕ್ಕೆ ಕೆಎಸ್ಆರ್’ಟಿಸಿ ಬಸ್ ಸೇವೆಗಳನ್ನು ಸ್ಥಗಿತ ಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ ನಿನ್ನೆ ನಡೆದ ಕಲ್ಲು ತೂರಾಟದಲ್ಲಿ ರಾಜ್ಯದ ೆರಡು ಬಸ್ಸ್ ಗಳಿಗೆ ಕಲ್ಲು ತೂರಿ ಜಖಂ ಗೋಳಿಸಲಾಗಿತ್ತು ಈ ಕಾರಣದಿಂದ ಈ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿದು ಬಂದಿದೆ .