ಬೆಂಗಳೂರು :
ಕೊರೋನಾ 2ನೇ ಅಲೆಯ ಅಬ್ಬರಕ್ಕೆ ರಾಜ್ಯಾದ್ಯಂತ ವಾರಾಂತ್ಯ ಸಂಪೂರ್ಣ ಕರ್ಪ್ಯೂ ಜಾರಿಗೊಳಿಸಲಾಗಿದ್ದು, ಇದರ ಮಧ್ಯೆಯೂ ಸಾರಿಗೆ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಕರ್ನಾಟಕ ಸರ್ಕಾರವು ವಾರಾಂತ್ಯದಲ್ಲಿ ಅಂದರೆ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ಕರ್ಪ್ಯೂ ಜಾರಿಗೊಳಿಸಿರುತ್ತದೆ. ಕರ್ಪ್ಯೂ ಮಧ್ಯೆಯೂ ಪ್ರಯಾಣಿಕರ ಅಗತ್ಯತೆಗೆ ಅನುಗುಣವಾಗಿ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚರಿಸಲಿದೆ.
ಕರ್ಫ್ಯೂ ಅವಧಿಯಲ್ಲಿ ಕೆ.ಎಸ್.ಆರ್.ಟಿ.ಸಿ ನಿಗಮದ ಬಸ್ಸುಗಳ ಕಾರ್ಯಾಚರಣೆ ಇದ್ದು, ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆ ಅನುಗುಣವಾಗಿ ಮಾತ್ರ ಸಾರಿಗೆಗಳನ್ನು ಕಾರ್ಯಾಚರರಿಸಲಾಗುವುದು. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
