ಕಾಂಗ್ರೆಸ್ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಬಿಜೆಪಿಗೆ ಸೇರ್ಪಡೆ!!

ಬೆಂಗಳೂರು :

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
      ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ವಿರೂಪಾಕ್ಷಪ್ಪ ಬಿಜೆಪಿ ಸೇರ್ಪಡೆಯಾಗಿದ್ದಾರೆ.
https://twitter.com/BJP4Karnataka/status/1369179343742590976?ref_src=twsrc%5Etfw%7Ctwcamp%5Etweetembed%7Ctwterm%5E1369179343742590976%7Ctwgr%5E%7Ctwcon%5Es1_&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FBJP4Karnataka2Fstatus2F1369179343742590976widget%3DTweet
     ಪಕ್ಷದ ಉಪಾಧ್ಯಕ್ಷರಾದ ಕೆ ಎಸ್ ಈಶ್ವರಪ್ಪ. ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್,  ಸಿದ್ದರಾಜು, ಕೊಪ್ಪಳದ ಸಂಸದ  ಕರಡಿ ಸಂಗಣ್ಣ, ದೊಡ್ಡಣಗೌಡ ಪಾಟೀಲ್ ಸಮ್ಮುಖದಲ್ಲಿ ಮಾಜಿ ಸಂಸದ ಶ್ರೀ ಕೆ ವಿರೂಪಾಕ್ಷಪ್ಪರವರು ಹಾಗೂ ಅವರ ಅಪಾರ ಬೆಂಬಲಿಗರನ್ನು ಪಕ್ಷದ ಸಿದ್ದಾಂತವನ್ನು ಗೌರವಿಸಿ ಭಾರತೀಯ ಜನತಾ ಪಕ್ಷಕ್ಕೆ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

     ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ಟಿಕೆಟ್‌ ನೀಡಲಿಲ್ಲವೆಂಬ ಕಾರಣಕ್ಕೆ ವಿರೂಪಾಕ್ಷಪ್ಪ ಮುನಿಸಿಕೊಂಡು ಕಾಂಗ್ರೆಸ್‌ನ ಕೈ ಹಿಡಿದುಕೊಂಡು ಇಲ್ಲಿಯವರೆಗೂ ಬಂದಿದ್ದರು. ಈ ಮಧ್ಯೆ ಸಿಂಧನೂರಿನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಗೌಪ್ಯವಾಗಿ ವಿರೂಪಾಕ್ಷಪ್ಪನವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದರು. 

      ಆಗಿನಿಂದಲೂ ವಿರೂಪಾಕ್ಷಪ್ಪ ಬಿಜೆಪಿ ಸೇರುತ್ತಾರೆ ಎಂಬುದು ಕೇಳಿ ಬರುತ್ತಿತ್ತು. ತದನಂತರ ಕುರುಬರ ಎಸ್‌ಟಿ ಹೋರಾಟ ಸಮಿತಿ ಸಮಾವೇಶಗಳಲ್ಲಿ ಬಹಿರಂಗವಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿದ ನಂತರವಂತೂ ವಿರೂಪಾಕ್ಷಪ್ಪ ಕಾಂಗ್ರೆಸ್‌ ಬಿಡುವ ಮುನ್ಸೂಚನೆ ನೀಡಿದ್ದರು. ಈಗ ಬಿಜೆಪಿ ಸೇರುವ ಉತ್ತರದ ಮೂಲಕ ಎಲ್ಲರ ಅನುಮಾನಗಳಿಗೆ ತಿಲಾಂಜಲಿ ಹಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap