ಬೆಂಗಳೂರು
ಸ್ವಾತಂತ್ರ್ಯ ಕಾಲದಿಂದಲ್ಲೂ ಇರುವ ಪಕ್ಷ ಕಾಂಗ್ರೇಸ್ ಆದರೆ ಆ ಪಕ್ಷದ ಶಾಸಕರೇ ಹೇಳುವಂತೆ ನಮ್ಮ ಪಕ್ಷದಲ್ಲಿ ಏನು ಸರಿಯಿಲ್ಲ ಹಿರಿಯ ನಾಯಕರು ಜಾತಿ ಭೇದ ಮಾಡುತ್ತಿದ್ದಾರೆ ಇದರಿಂದಾಗಿ ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮುಂದೆ ಮಂಡಿಯೂರಿ, ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿದೆ. ನನಗೆ ನನ್ನ ಕ್ಷೇತ್ರದ ಮತದಾರರೇ ಹೈಕಮಾಂಡ್. ಸಂಪುಟ ವಿಸ್ತರಣೆಯನ್ನು ವಿಳಂಬದಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು ಹಿರೇಕೆರೂರಿನ ಕಾಂಗ್ರೆಸ್ ಶಾಸಕ ಬಿಸಿ ಪಾಟೀಲ್ ಅವರು ಖಾರವಾಗಿ ಟ್ವೀಟ್ ಮಾಡಿದ್ದಾರೆ.
ಉತ್ತರ ಕರ್ನಾಟಕ ಭಾಗದಿಂದ 16 ಲಿಂಗಾಯತ ಶಾಸಕರು ಆಯ್ಕೆಯಾಗಿದ್ದಾರೆ. ಆದರೆ ಕೇವಲ ಒಬ್ಬರಿಗೆ ಸಚಿವ ಸ್ಥಾನ ನೀಡಿದ್ದಾರೆ. ಲಿಂತಾಯತ ಶಾಸಕರು ಏನು ಮಾಡಿದ್ದಾರೆ. ನಮ್ಮಲ್ಲಿಯೇ ಯಾರೋ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ ಎಂದು ಹಿರೇಕೆರೂರು ಕ್ಷೇತ್ರದ ಶಾಸಕ ಬಿ.ಸಿ. ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದ್ದು, ಇದಕ್ಕೆ ನಾನಾ ಕಾರಣಗಳಿರಬಹುದು . ಆದರೆ, ಇದರಿಂದ ನಿಷ್ಠಾವಂತ ಕಾಂಗ್ರೆಸ್ಸಿಗರಿಗೆ ಅನ್ಯಾಯವಾಗುತ್ತಿದೆ. ಪ್ರಜಾಪ್ರಭುತ್ವಕ್ಕೆ ಬೆಲೆ ಇಲ್ಲದ್ದಂತಾಗಿದೆ ಎಂದು ತಮ್ಮ ಪಕ್ಷದ ವಿರುದ್ಧವೇ ಬಿಸಿ ಪಾಟೀಲ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ನಾಯಕರಿಗೆ ಟ್ಯಾಗ್ ಮಾಡಿ ಇಂಗ್ಲೀಷ್ ನಲ್ಲಿ ಟ್ವೀಟ್ ಮಾಡಿದ್ದಾರೆ.
Dragging the expansion of cabinet in Karnataka is an act of insult to legsitators, killing democracy, upholding the dictatorship in the name of party. @INCKarnataka @dineshgrao @RahulGandhi @siddaramaiah @DrParameshwara
— Kourava B.C.Patil (@kourvabcpatil) October 7, 2018
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ