ಚಿತ್ರದುರ್ಗ:
ನಗರದ ಹೊರವಲಯದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಡಿಕ್ಕಿಯ ರಭಸಕ್ಕೆ ಎರಡೂ ಬೈಕಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಹೊರವಲಯದ ಸಮೀಪ ಕ್ಯಾದಿಗೆರೆ ಬಳಿ ನಡೆದಿದೆ.
ರಫೀಕ್ (26), ರಜೀಯಾ (50) ಒಂದು ಬೈಕ್‌ನಲ್ಲಿದ್ದ ತಾಯಿ, ಮಗ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್‌ನಲ್ಲಿದ್ದ ಹಿಂಬದಿ ಸವಾರ ಸಿದ್ದು (25) ಸಹ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಬೈಕ್ ಸವಾರ ಗಾಯಗೊಂಡಿದ್ದು, ಚಿತ್ರದುರ್ಗದ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತ ರಫೀಕ್ ಮತ್ತು ರಜೀಯಾ ಸಂಬಂಧಿಕರ ವಿವಾಹ ಸಮಾರಂಭಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದರು. ಮದುವೆ ಕಾರ್ಯಕ್ರಮ ಮುಗಿಸಿ ಬಳಿಕ ಮರಡಿಹಳ್ಳಿಗೆ ವಾಪಾಸ್ಸಾಗುತ್ತಿದ್ದರು. ಈ ವೇಳೆ ಕ್ಯಾದಿಗೆರೆ ಸಮೀಪ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
