ಸಂಜೆ 6 ಗಂಟೆಗೆ ಮಾಸ್ಟರ್ ಹಿರಣ್ಣಯ್ಯ ಅಂತ್ಯಸಂಸ್ಕಾರ!

ಬೆಂಗಳೂರು:

      ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ರಂಗಕರ್ಮಿ, ಕಲಾವಿದ, ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.  

      ಇಂದು ಸಂಜೆ 6 ಗಂಟೆಗೆ ಚಾಮರಾಜಪೇಟೆಯಲ್ಲಿರುವ ರುದ್ರಭೂಮಿಯಲ್ಲಿ ಹಿರಣ್ಣಯ್ಯರವರ ಅಂತ್ಯಸಂಸ್ಕಾರ ನಡೆಯಲಿದ್ದು, ಬನಶಂಕರಿಯ 2 ನೇ ಹಂತದಲ್ಲಿರುವ ಹಿರಣ್ಣಯ್ಯ ಅವರ ನಿವಾಸ ಶಾಂತಿಸಾಗರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

      ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ,ಸಚಿವ ಡಿ.ಕೆ.ಶಿವಕುಮಾರ್‌ , ಮಾಜಿ , ಡಿಸಿಎಂ ಆರ್‌.ಅಶೋಕ್‌ , ಮುಖ್ಯಮಂತ್ರಿ ಚಂದ್ರು , ನಟರಾದ ಶ್ರೀನಾಥ್‌ , ದೇವ್‌ರಾಜ್‌, ದರ್ಶನ್‌, ಪ್ರಜ್ವಲ್‌ ದೇವ್‌ರಾಜ್‌ ಸೇರಿದಂತೆ ರಂಗಭೂಮಿ, ಸಿನಿಮಾ ಮತ್ತು ಕಿರುತೆರೆಯ ನೂರಾರು ಕಲಾವಿದರು ಆಗಮಿಸಿ ಹಿರಿಯ ಚೇತನಕ್ಕೆ ಅಂತಿಮ ನಮನ ಸಲ್ಲಿಸಿದರು.

ಸಂಜೆ ಮೆರವಣಿಗೆ ಬಳಿಕ ಅಂತ್ಯಕ್ರಿಯೆ:

       ಇಂದು ಸಂಜೆ 6 ರ ವೇಳೆಗೆ ಬನಶಂಕರಿಯ ಚಿತಾಗಾರದಲ್ಲಿ ಬ್ರಾಹ್ಮಣ ವಿಧಿ ವಿಧಾನದಂತೆ ಹಿರಣ್ಣಯ್ಯ ಅವರ ಅಂತ್ಯ ಸಂಸ್ಕಾರ ನಡೆಯಲಿದೆ. ಇದಕ್ಕೂ ಮುನ್ನ ನಿವಾಸದಿಂದ ವಿಶೇಷ ಅಲಂಕೃತ ವಾಹನದಲ್ಲಿ ಮಾಸ್ಟರ್‌ ಹಿರಣ್ಣಯ್ಯ ಅವರ ಅಂತಿಮ ಯಾತ್ರೆಯ ಮೆರವಣಿಗೆ ನಡೆಯಿದೆ. ಈಗಾಗಲೆ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ.

      ಲಿವರ್‌ ಸಮಸ್ಯೆಯಿಂದ ಬಳಲುತ್ತಿದ್ದ 86 ರ ಹರೆಯದ ಮಾಸ್ಟರ್‌ ಹಿರಣ್ಣಯ್ಯ ಅವರು ಬಿಜಿಎಸ್‌ ಗ್ಲೋಬಲ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link