ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಚುನಾವಣೆ

ಬೆಂಗಳೂರು:

   ಕರ್ನಾಟಕಕ್ಕೆ ಬಹಳಷ್ಟು ಅನುದಾನ ಈಗಾಗಲೇ ಕೊಟ್ಟಿದ್ದು, ಅದನ್ನು ಇನ್ನೂ ಸರ್ಕಾರ ಖರ್ಚು ಮಾಡಿಲ್ಲ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.ಬೆಂಗಳೂರಿಗೆ ಬಂದಿರುವ ಕೇಂದ್ರ ಕೃಷಿ ಸಚಿವರು ರಾಜ್ಯದ ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನ ಕುಮಾರಕೃಪಾ ಗೆಸ್ಟ್​ಹೌಸ್​ನಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದರು.

   ಭೇಟಿ ಬಳಿಕ ಮಾತನಾಡಿ ಇಂದು ಅಡಿಕೆ ಬೆಳಗಾರರ ಸಮಸ್ಯೆಗಳ ಪರಿಹಾರಕ್ಕೆ ಅನುದಾನ ಕೋರಲಾಯಿತು. ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ 97 ಕೋಟಿ ರೂ ಬಿಡುಗಡೆ ಮಾಡುತ್ತಿದ್ದೇವೆ. ಪ್ರತಿ ಬಡವನಿಗೂ ಮನೆ ಸಿಗಬೇಕು ಅನ್ನೋದು ಮೋದಿಯವರ ಸಂಕಲ್ಪ. ಕಳೆದ ಸೆಪ್ಟೆಂಬರ್‌ನಲ್ಲಿ ಕರ್ನಾಟಕಕ್ಕೆ 2,57,246 ಮನೆಗಳನ್ನು ಕಟ್ಟಲು ಒಪ್ಪಿಗೆ ನೀಡಿ ಅನುದಾನವನ್ನೂ ಕೊಟ್ಟಿದ್ವಿ. ಇಂದು ಮತ್ತೆ ಕರ್ನಾಟಕದ ಬಡಜನರಿಗೆ ಮನೆ ಕಟ್ಟಲು ಟಾರ್ಗೆಟ್ ಹೆಚ್ಚಿಸಲಾಗಿದೆ.

   ಇದಕ್ಕಾಗಿ ಇಂದು 4,67,580 ಮನೆಗಳನ್ನು ಕಟ್ಟಲು ಒಪ್ಪಿಗೆ ಕೊಟ್ಟಿದ್ದೇವೆ. ಮನೆಗಳ ನಿರ್ಮಾಣ ಕಾರ್ಯಕ್ಕೆ ವೇಗ ‌ಕೊಡಲು ಸೂಚಿಸಲಾಗಿದೆ. ಹಿಂದೆ ನೀಡಿದ್ದ ಅನುದಾನ ಪೂರ್ತಿ ಬಳಕೆ ಮಾಡಲು ತಿಳಿಸಲಾಗಿದೆ, ಬಿಡುಗಡೆ ಮಾಡಿರುವ ಅನುದಾನ ಸದ್ಬಳಕೆಯಾಗಲಿ. ಅವರು ಅನುದಾನ ಕೇಳದಿದ್ದರೂ ನಾವೇ ಘೋಷಣೆ ಮಾಡಿದ್ದೇವೆ ಎಂದರು.

   ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ಶುರುವಾಗಲಿದ್ದು. ಬೂತ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸ್ಥಾನದವರೆಗೂ ಚುನಾವಣೆ ನಡೆಸಿ ಆಯ್ಕೆ ಮಾಡುತ್ತೇವೆ. ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಎಲ್ಲರೂ ಸೇರಿ ಚರ್ಚಿಸಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡಲಾಗುವುದು.