ಹಣಕಾಸು ಇಲಾಖೆಯಲ್ಲಿ ಎಸಿಎಸ್ ಎಲ್‌ ಕೆ ಅತೀಕ್‌ ಗೆ ವಿಶೇಷ ಜವಾಬ್ದಾರಿ …!

ಬೆಂಗಳೂರು

        ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್ ಕೆ ಅತಿಕ್ ಅವರನ್ನ ಹಣಕಾಸು ಇಲಾಖೆ ವಿಶೇಷ ಅಧಿಕಾರಿಯಾಗಿ ನಿಯೋಜಿಸಲಾಗಿದೆ . 

    ಹಾಲಿ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರಸಾದ್‌ ಅವರು  ಜೂನ್ 30ರಂದು ನಿವೃತ್ತರಾಗಲಿದ್ದು, ಜೂನ್ 30ರ ಬಳಿಕ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಅತೀಕ್‌ ಅವರು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ  ಆದೇಶದಲ್ಲಿ ತಿಳಿಸಿದೆ. 

     2022ರ ಮಾರ್ಚ್‌ನಲ್ಲಿ ಎಲ್‌. ಕೆ. ಅತೀಕ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಬಡ್ತಿ ಪಡೆದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿಯೇ ಮುಂದುವರೆದಿದ್ದರು. ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಅವರು ಬಹಳ ಸಕ್ರಿಯರಾಗಿದ್ದು, ಗ್ರಾಮೀಣ ಬದುಕಿನ ಹಲವು ಚಿತ್ರಣಗಳನ್ನು ಹಂಚಿಕೊಳ್ಳುತ್ತಾರೆ.

    1965ರಲ್ಲಿ ಜನಿಸಿದ ಎಲ್. ಕೆ. ಅತೀಕ್ 1991ರ ಬ್ಯಾಚ್‌ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಯಾಗಿದ್ದು. ಕೃಷಿ ಮತ್ತು ಅರ್ಥಶಾಸ್ತ್ರ ವಿಷಯದಲ್ಲಿ ಅವರು ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅನೇಕ ಇಲಾಖೆಗಳಲ್ಲಿ ಆಯಕಟ್ಟಿನ ಹುದ್ದೆಯಲ್ಲಿದ್ದ ಇವರು ಗ್ರಾಮೀಣಾಭಿವೃದ್ದಿ ಇಲಾಖೆ ಯೋಜನೆ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು . ಪ್ರಸ್ತುತ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ಗ್ಯಾರೆಂಟಿ ಯೋಜನೆಗಳ ಜಾರಿಯಲ್ಲಿ ಪ್ರಮುಖ ಪಾತ್ರ ವಹಿಸುವ ಹಣಕಾಸು ಇಲಾಖೆಯ ಜವಾಬ್ದಾರಿ ಅತೀಕ್‌ ಅವರಿಗೆ ದೊರೆತಿರುವುದು ಮಹತ್ತರವೆನಿಸಿದೆ

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap