ತುಮಕೂರು:
ಕುಣಿಗಲ್ ಕ್ಷೇತ್ರದ ಶಾಸಕ ಡಾ.ರಂಗನಾಥ್ ಅವರಿಗೆ ಕೊರೊನಾ ಮಹಾಮಾರಿ ವಕ್ಕರಿಸಿದೆ.
ರಾಜ್ಯದಲ್ಲಿ ಲಗಾಮು ಇಲ್ಲದೆ ಚಲಿಸುತ್ತಿರುವ ಕೊರೊನಾ ವೈರಸ್, ವಾರಿಯರ್ಸ್, ಜನಪ್ರತಿನಿಧಿಗಳಿಗೂ ವಕ್ಕರಿಸುತ್ತಿದೆ. ಇದೀಗ ಕುಣಿಗಲ್ ಶಾಸಕ ಡಾ.ರಂಗನಾಥ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಶಾಸಕರು, ಜು.5ರ ಭಾನುವಾರ ಕೊರೊನಾ ತಪಾಸಣೆಗೆ ಒಳಗಾಗಿದ್ದರು. ಜು.6ರ ಸೋಮವಾರ ಅವರ ವರದಿ ಬಂದಿದ್ದು, ಸೋಂಕು ತಗಲಿರುವುದು ದೃಢಪಟ್ಟಿದೆ. ಸದ್ಯ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಈ ಬಗ್ಗೆ ಮಾತನಾಡಿದ ಶಾಸಕರು, “ಸಾಕಷ್ಟು ಎಚ್ಚರಿಕೆ ವಹಿಸಿದ ಬಳಿಕವೂ ಸೋಂಕು ತಗಲಿದೆ. ಆದ್ದರಿಂದ ಜನರು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ನಾನು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗುತ್ತಿದ್ದೇನೆ. ಕ್ಷೇತ್ರದ ಜನತೆ ನನ್ನ ಬಗ್ಗೆ ಚಿಂತಿಸುವುದು ಬೇಡ’ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ