ಬೆಂಗಳೂರು:
ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಆಪರೇಷನ್ ಹಸ್ತಕ್ಕೆ ಒಳಗಾಗಿ ಮತ್ತೆ ಕಾಂಗ್ರೆಸ್ ಗೆ ಮರಳುವ ಬಗ್ಗೆ ಸಿದ್ಧತೆ ನಡೆಸಿದ್ದಾರೆ ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆನ್ನಲ್ಲೇ ಈ ಬಗ್ಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ನಾನು ಬಿಜೆಪಿಯಲ್ಲಿಯೇ ಇದ್ದೇನೆ, ಸೈಲೆಂಟ್ ಆಗಿಲ್ಲ. ಕಾಂಗ್ರೆಸ್ ಗೆ ಸೇರುವ ಯಾವುದೇ ಯೋಚನೆಯೂ ಇಲ್ಲ ಎಂದಿದ್ದಾರೆ.ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಆಲೋಚನೆ ಇಲ್ಲ. ಸಚಿವ ರಾಮಲಿಂಗಾ ರೆಡ್ಡಿ ಭೇಟಿ ವೇಳೆ ಯಾವುದೇ ರಾಜಕೀಯ ವಿಚಾರ ಚರ್ಚೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ