ಬೆಂಗಳೂರು:
ಶಾಲೆ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ರ‍್ಯಾಗಿಂಗ್ ಮಾಡುವುದು ಸಾಮಾನ್ಯ ಆದರೆ ಅದು ವಿಕೋಪಕ್ಕೆ ಹೋದರೆ ತಪ್ಪು ಇದೇ ರೀತಿ ಒಂದು ಪ್ರಕರಣ ವರದಿಯಾಗಿದ್ದು 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ರ್ಯಾಗಿಂಗ್ ಗೆ ಗುರಿಯಾಗಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ವೈಷ್ಣವಿಗೆ ಕಳೆದ ಒಂದು ವಾರದ ಹಿಂದೆ ರ‍್ಯಾಗಿಂಗ್ ಮಾಡಲಾಗಿತ್ತು, ಇದರಿಂದ ಖಿನ್ನತೆಗೊಳಗಾಗಿದ್ದ ಆಕೆ ಶನಿವಾರ ರಾತ್ರಿ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ .
ರ‍್ಯಾಗಿಂಗ್ ಬಗ್ಗೆ ಪೋಷಕರಿಗೆ ವಿಷಯ ತಿಳಿಸಿದ್ದ ವೈಷ್ಣವಿ ಶಾಲೆಯಲ್ಲಿ ಈ ಬಗ್ಗೆ ಯಾರಿಗೂ ಮಾಹಿತಿ ನೀಡಿರಲಿಲ್ಲ ಎಂದು ತಿಳಿದು ಬಂದಿದೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ