ಬೆಂಗಳೂರು:
ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳು, ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಿದ್ಯಾರ್ಥಿನಿಯು ನಗರದ ಜ್ಞಾನಭಾರತಿ ಕ್ಯಾಂಪಸ್‌ನ ಕನ್ನಡ ಅಧ್ಯಯನ ಕೇಂದ್ರದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಳು. ಹಾಸ್ಟೆಲ್‌ನಲ್ಲಿ ಮಧ್ಯಾಹ್ನ ನೇಣು ಬಿಗಿದುಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ.
ಎಚ್‌ಡಿ ಕೋಟೆಯ ಹೆಬ್ಬಲಗುಪ್ಪೆ ಹಳ್ಳಿಯ ಪಾವನ ಹೆಚ್‌ಎನ್ (23) ಮೃತ ವಿದ್ಯಾರ್ಥಿನಿ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ