ಬೆಂಗಳೂರು
ಕರ್ನಾಟಕದಲ್ಲಿ ಇತ್ತೀಚೆಗೆ ಭಾರಿ ಸುದ್ದಿಮಾಡಿದ್ದ ಮಾಡಳ್ ವಿರೂಪಾಕ್ಷಪ್ಪ ಪ್ರಕರಣ ಕುರಿತಂತೆ ಪ್ರತಿಪಕ್ಷ ಕಾಂಗ್ರೆಸ್ ಗುರುವಾರ ಕರ್ನಾಟಕದಲ್ಲಿ ಎರಡು ಗಂಟೆಗಳ ಕಾಲ ಬಂದ್‌ಗೆ ಕರೆ ನೀಡಿದ್ದು ,ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಕ್ಕೊಳಗಾಗಿದ್ದಾರೆ.

ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ. ಬೆಳಿಗ್ಗೆ 9 ರಿಂದ 11 ರವರೆಗೆ ಬಂದ್‌ಗೆ ಕರೆ ನೀಡಲಾಗಿದೆ. ಇದು ವಿದ್ಯಾರ್ಥಿಗಳ ಪ್ರಯಾಣದ ಸಮಯದಲ್ಲಿ ನಡೆಯಲಿದೆ. ಜೊತೆಗೆ ಅವರ ಪರೀಕ್ಷೆಯ ಸಮಯದವರೆಗೂ ನಡೆಯುತ್ತದೆ.ಬಿಜೆಪಿಯ ಭ್ರಷ್ಟಾಚಾರವನ್ನು ಪ್ರತಿಭಟಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭಾನುವಾರ ಬಂದ್ ಘೋಷಿಸಿದರು.
ಜೊತೆಗೆ ಗುರುವಾರ ಕರ್ನಾಟಕದಲ್ಲಿ ಎರಡು ಗಂಟೆಗಳ ಕಾಲ ಬಂದ್‌ಗೆ ಕರೆ ನೀಡಿದರು. ಶಾಲೆಗಳು, ಕಾಲೇಜುಗಳು ಮತ್ತು ಕಚೇರಿಗಳು ಕಾರ್ಯನಿರ್ವಹಿಸುವ ಈ ಸಮಯದಲ್ಲಿ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವಂತೆ ಪಕ್ಷವು ಕೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ