ವಿದ್ಯಾರ್ಥಿನಿಯರು `ಹಿಜಾಬ್’ ಧರಿಸಿ ಪರೀಕ್ಷೆ, ತರಗತಿಗೆ ಹಾಜರಾಗಲು ನಿಯಮ ಸಡಿಲಿಕೆ ಇಲ್ಲ : ಸಚಿವ ಬಿ.ಸಿ.ನಾಗೇಶ್

ಬೆಂಗಳೂರು :

ಹೈಕೋರ್ಟ್ ತೀರ್ಪಿನ ಅನುಸಾರ ಹಿಜಾಬ್ ಧರಿಸಿ ಶಾಲೆಗೆ ಹಾಜರಾಗಲು ಅಥವಾ ಪರೀಕ್ಷೆಗೆ ಹಾಜರಾಗಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡಿದೆ ಹೀಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಮತ್ತೆ ಅವಕಾಶ ಸಡಿಲಿಕೆ ಇರುವುದಿಲ್ಲ.

 ಬೆಳ್ಳೂಡಿ ಶಾಖಾ ಮಠದಲ್ಲಿ ಐಎಎಸ್/ ಕೆಎಎಸ್ ತರಬೇತಿ ಕೇಂದ್ರ ಆರಂಭಿಸಲು ಪೂರ್ವ ಸಿದ್ಧತೆ

ಇನ್ನು ಮುಂದೆ ಪರೀಕ್ಷೆಯ ವಿಚಾರದಲ್ಲಿ ವಿಶೇಷ ಅವಕಾಶವನ್ನು ನೀಡಲ್ಲ. ಇಷ್ಟು ದಿನ ಕೋರ್ಟ್ ತೀರ್ಪು ಬಂದಿರಲಿಲ್ಲ. ಹೀಗಾಗಿ ಶಿಕ್ಷಣ ಇಲಾಖೆ ಕೊಂಚ ಸಡಿಲಿಕೆ ನೀಡಿತ್ತು. ಇನ್ನುಮುಂದೆ ಮತ್ತೆ ಯಾವುದೇ ಕಾರಣಕ್ಕೂ ಪರೀಕ್ಷೆ ಮತ್ತು ತರಗತಿಯಲ್ಲಿ ಹಿಜಾಬ್ ಅವಕಾಶ ಇಲ್ಲ ಎಂದು ಹೇಳಿದ್ದಾರೆ.

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಕೆಲ ವಿದ್ಯರ್ಥಿಗಳು ಸುಪ್ರೀಂಕೋರ್ಟ್ ಗೆ ಮೊರೆ ಹೋಗಿದ್ದು, ಸುಪ್ರೀಂಕೋರ್ಟ್ ತೀರ್ಪು ಬರುವವರೆಗೂ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೆಲ ಮುಸ್ಲಿಂ ವಿದ್ಯಾರ್ಥಿಗಳು ಬೇಡಿಕೆ ಿಟ್ಟಿದ್ದರು. ಆದರೆ ಅದಕ್ಕೆ ಅವಕಾಶ ಇರುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link