ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿಯನ್ನು ಹೈಕಮಾಂಡ್​ಗೆ ಸಲ್ಲಿಸಿದ್ದೇನೆ : ಡಿ ಕೆ ಶಿವಕುಮಾರ್‌

 ಬೆಂಗಳೂರು:

   ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿಯನ್ನು ಹೈಕಮಾಂಡ್​ಗೆ ಸಲ್ಲಿಸಿದ್ದೇನೆ. ಈಗಾಗಲೇ ಒಂದು ಸುತ್ತಿನ ಸಭೆ ನಡೆದಿದೆ. ಎಐಸಿಸಿ ಅಧ್ಯಕ್ಷರು ಹಾಗೂ ಇತರರ ಜೊತೆ ಚರ್ಚಿಸಿ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

    ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾತನಾಡಿದ ಅವರು, 300ಕ್ಕೂ ಹೆಚ್ಚು ಆಕಾಂಕ್ಷಿಗಳಿರುವ ಕಾರಣ ಒಂದಿಷ್ಟು ಜನರಿಗೆ ಅವಕಾಶ ನೀಡಲಾಗಿದೆ. ಎಲ್ಲಾ ವರ್ಗದವರಿಗೂ ಈ ಬಾರಿ ಅವಕಾಶ ಮಾಡಿಕೊಡಲು ಸಾಧ್ಯವಾಗಿಲ್ಲ ಎಂದರು.

    ಪ್ರಾಥಮಿಕವಾಗಿ ಒಂದಿಷ್ಟು ಹೆಸರುಗಳನ್ನು ನಾವು ಸೂಚಿಸಿದ್ದೇವೆ. ಸಚಿವರು, ಎಐಸಿಸಿ ಕಾರ್ಯದರ್ಶಿಗಳು ತಮ್ಮ ಆಯ್ಕೆಗಳನ್ನು ಶಿಫಾರಸು ಮಾಡಿದ್ದಾರೆ. ಮುಂದಿನ ಎರಡು ವರ್ಷಗಳ ನಂತರ ಮತ್ತೊಮ್ಮೆ ಇದೇ ರೀತಿ ಅವಕಾಶ ಬರುವ ಕಾರಣ ಅವರಿಗೆಲ್ಲ ಮುಂದಿನ ಬಾರಿ ಸ್ಥಾನ ನೀಡಲಾಗುತ್ತದೆ. ಈಗ ಏಳರಿಂದ-ಎಂಟು ಮಂದಿಗೆ ಅವಕಾಶ ಮಾಡಿಕೊಡಲಾಗುವುದು. ಪಕ್ಷ ಸಂಘಟನೆಗೆ ದುಡಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

    ಪಕ್ಷ ಏನು ಹೇಳುತ್ತದೋ ಅದರಂತೆ ಕೇಳಬೇಕು. ನಮ್ಮ ಪಟ್ಟಿಯನ್ನು ನಾವು ಸಲ್ಲಿಸಿದ್ದೇವೆ. ಹೈಕಮಾಂಡ್ ಎಐಸಿಸಿ ಕಾರ್ಯದರ್ಶಿಗಳ ಬಳಿಯೂ ಪಟ್ಟಿ ತೆಗೆದುಕೊಳ್ಳುತ್ತದೆ. ಚುನಾವಣೆ ಸಮಯದಲ್ಲಿ ಕೆಲಸ ಮಾಡಿದವರು ಯಾರು, ಅವರ ಹಿನ್ನೆಲೆ, ತ್ಯಾಗ, ಶ್ರಮಪಟ್ಟಿರುವರ ಹೆಸರು ಹೈಕಮಾಂಡ್​​ಗೆ ಸಲ್ಲಿಕೆಯಾಗುತ್ತದೆ. ಹಿರಿಯರು, ಯುವಕರು ಸೇರಿದ ಸಮತೋಲಿತ ಪಟ್ಟಿಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.

Recent Articles

spot_img

Related Stories

Share via
Copy link
Powered by Social Snap