ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆ ಅಗತ್ಯ : ಟಿ.ಬಿ.ಜೆ

ಶಿರಾ:

     ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರ್ತಿಸಿ ಪ್ರೋತ್ಸಾಹಿಸಿದಾಗ ಮಾತ್ರಾ ಅವರಲ್ಲಿನ ಮತ್ತಷ್ಟು ಪ್ರತಿಭೆಯನ್ನು ಹೊರಹೊಮ್ಮಿಸಲು ಸಾದ್ಯವಿದ್ದು ಮಕ್ಕಳ ಪ್ರತಿಭೆಯ ಅನಾವರಣಕ್ಕೆ ವೇದಿಕೆ ಅಗತ್ಯ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.

   ನಗರದ ವರ್ಧಮಾನ್ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ನಡೆದ ಪದವಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

   ಮಕ್ಕಳ ಮಾನಸಿಕ, ದೈಹಿಕ ಬೆಳವಣಿಗೆಯೊಂದಿಗೆ ಅವರ ಪ್ರತಿಭೆ ಗುರ್ತಿಸಿ ಸಮಾಜಕ್ಕೆ ಪರಿಚಯಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾದುದು. ಶಿಕ್ಷಣವು ಕೇವಲ ಅಂಕಗಳಿಗಷ್ಟೇ ಮೀಸಲಾಗಬಾರದು. ಯಾವುದೇ ಶಾಲೆಗಳಲ್ಲಿ ಮಕ್ಕಳಿಗೆ ಸಂಸ್ಕಾರವನ್ನು ಬೆಳೆಸುವಂತಾಗಬೇಕು ಎಂದರು.

    ಅನೇಕ ಶಾಲೆಗಳು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಎಡವುತ್ತಿದ್ದು ಜೀವನದಲ್ಲಿ ನಡೆದುಕೊಳ್ಳ ಬೇಕಾದ ರೀತಿ ನೀತಿ ಮತ್ತು ಮಾನವೀಯ ಮೌಲ್ಯಗಳನ್ನು ಮಕ್ಕಳಿಗೆ ಕಲಿಸಿಕೊಡಬೇಕು ಎಂದು ಟಿ.ಬಿ.ಜಯಚಂದ್ರ ಹೇಳಿದರು.ಶಾಲೆಯ ಮುಖ್ಯಸ್ಥ ಸಂಜಯ್ ಎನ್.ಗೌಡ, ಕಾರ್ಯದರ್ಶಿ ಕಪಿಲ್‌ದೇವ್, ನಿರ್ದೇಶಕ ಸಂಪತ್‌ರಾಜ್, ಜೀತು, ಶಾಲಾ ಮುಖ್ಯ ಶಿಕ್ಷಕಿ ಸುಭಾಷಿಣಿ, ಮಧು, ರೇಖಾ ಸಹನಾ, ಕವಿತಾ, ಅಂಜನ ಮುಂತಾದವರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap