ಸಿಮ್ ಕಾರ್ಡ್ಗಳಿಗೆ ಆಧಾರ್ ಲಿಂಕ್ ಜೋಡಣೆಗೆ ಅಗತ್ಯ ಕ್ರಮ : ಸಚಿವ

ಬೆಂಗಳೂರು

    ಇತ್ತಿಚೀನ ದಿನಗಳಲ್ಲಿ ಸೈಬರ್ ಅಪರಾಧಗಳು ವಿಚಿತ್ರವಾಗಿ ನಡೆಯುತ್ತಿವೆ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಬಹಳ ಬುದ್ದಿವಂತಿಕೆಯಿAದ ಬುದ್ದಿವಂತರೇ ಮಾಡುತ್ತಿರುವುದ ಗಮನಿಸಲಾಗಿದೆ. ಸಿಮ್ ಕಾರ್ಡುಗಳಿಗೆ ಆಧಾರ್ ಲಿಂಕ್ ಜೋಡಣೆಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತಿಳಿಸಿದರು.

    ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಭಾರತಿ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು ಸಿಮ್‌ಕಾರ್ಡುಗಳ ಮಾರಾಟಕ್ಕೆ ಅನೇಕ ವಿದಿ ವಿಧನಗಳನ್ನು ತರಲಾಗಿದೆ. ಸಿಮ್ ಕಾರ್ಡುಗಳಿಗೆ ಆಧಾರ್ ಲಿಂಕ್ ಕಲ್ಪಿಸುವ ವ್ಯವಸ್ಥೆಯು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುವುದಿಲ್ಲ. ಇದು ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದ್ದು, ಕೇಂದ್ರ ಸರ್ಕಾರದೊಂದಿಗೆ ಸಮಾಲೋಚಿಸಿ ಅಗತ್ಯ ಕ್ರಮ ವಹಿಸಲಾಗುವುದು.

    ಸೈಬರ್ ಅಪರಾಧಗಳ ಬಗ್ಗೆ ಪೊಲೀಸ್ ಇಲಾಖೆಯ ಮುಖಾಂತರ ಸಾರ್ವಜನಿಕರಿಗೆ ಬಹಳಷ್ಟು ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸುತ್ತಿರುವುದಲ್ಲದೆ, ಅನೇಕ ಜಾಹೀರಾತುಗಳನ್ನು ಸಜಹ ನೀಡಲಾಗುತ್ತಿದೆ. ಸೈಬರ್ ಅಪರಾಧಗಳನ್ನು ಪತ್ತೆ ಹಚ್ಚಲು ಸಿಬ್ಬಂದಿಗಳಿಗೆ ತರಬೇತಿ ಸಹ ನೀಡಲಾಗಿದೆ. ಆರ್.ಬಿ.ಐ., ಪೊಲೀಸ್ ಮತ್ತು ಬ್ಯಾಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಇಂತಹ ಅಪರಾಧಗಳನ್ನು ತಡೆದು ಸಾರ್ವಜನಿಕರ ಹಿತ ಕಾಪಾಡಲು ಸರ್ಕಾರವು ಕ್ರಮ ವಹಿಸುತ್ತದೆ.

   ಸಾರ್ವಜನಿಕರೂ ಸಹ ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಇಂತಹ ಪ್ರಕರಣ ನಡೆದಂತಹ ಸಂದರ್ಭದಲ್ಲಿ ಕೂಡಲೇ ಪೊಲೀಸ್ ಇಲಾಖೆಯ ಸಹಾಯವಾಣಿ ೧೧೨ಗೆ ಕರೆ ಮಾಡಿ ತಿಳಿಸಿದಲ್ಲಿ ಪತ್ತೆ ಹಚ್ಚಲು ಅನುಕೂಲವಾಗುವುದು. ಸೈಬರ್ ಅಪರಾಧಗಳ ಪತ್ತಗಾಗಿ ಪ್ರತ್ಯೇಕ ವಿಭಾಗವಿದ್ದು, ಅದನ್ನು ಬಹಳಷ್ಟು ಬಲ ಪಡಿಸಿದ್ದೇವೆ ಎಂದು ಸಚಿವರು ತಿಳಿಸಿದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap