ಕಮಲ ಹಿಡಿಯುವರೇ ಸುಮಲತಾ ಅಂಬರೀಶ್‌….!

ಬೆಂಗಳೂರು:

     ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ​ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ವದಂತಿಗೆ ಪುಷ್ಠಿ ನೀಡುವತೆ  ಹಲವು ಬೆಳವಣಿಗೆ ನಡೆಯುತ್ತಿದ್ದು  ಅವರ ಮುಂದಿನ ನಡೆಯ ಬಗ್ಗೆ ಹಲವು ಕುತೂಹಲಕಾರಿ ವಿಷಯಗಳು ಕೇಳಿಬರುತ್ತಿರುವಾಗಲೆ ಸ್ಪೋಟಕ ಸುದ್ದಿಯೊಂದು ಕೇಳಿಬರುತ್ತಿದೆ ಅದುವೆ ಸುಮಲತಾ ಅವರು ನಾಳೆ ಬಿಜೆಪಿ ಸೇರುತ್ತಾರೆ ಎಂಬುದು. 

    ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಸ್.ಪುಟ್ಟರಾಜು, ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ ನಾಳೆ ಬಿಜೆಪಿ ಸೇರ್ತಾರೆ. ಮೋದಿ ಕಾರ್ಯಕ್ರಮದಲ್ಲೇ ಪಕ್ಷ ಸೇರ್ಪಡೆಗೆ ಪ್ಲ್ಯಾನ್ ಮಾಡಿದ್ದರು. ಆದರೆ ಮೋದಿಯವರು ಬರುವ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮ ಆಗಿರುವುದರಿಂದ ಅವಕಾಶ ಸಿಗಲಿಲ್ಲ ಎಂದು ಹೇಳಿದರು. ಈ ಮೂಲಕ ಸುಮಲತಾ ಬಿಜೆಪಿ ಸೇರುವುದು ಖಚಿತ ಎಂಬಂತಾಗಿದೆ. 

    ಈ ಮಧ್ಯೆ ನಾಳೆ ಸುಮಲತಾ ಅಂಬರೀಶ್ ಸುದ್ದಿಗೋಷ್ಠಿ ಕರೆದಿದ್ದು, ಅಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಬಗ್ಗೆ ಘೋಷಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಸುಮಲತಾ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್​ನಿಂದ​ ಗ್ರೀನ್ ಸಿಗ್ನಲ್​ ನೀಡಿದ್ದರಿಂದ ಸುಮಲತಾ ಅಂಬರೀಶ್ ತಮ್ಮ ನಿರ್ಧಾರ ಪ್ರಕಟಿಸಲು​ ಸುದ್ದಿಗೋಷ್ಠಿ ಕರೆದಿದ್ದಾರೆ ಎಂದು ಹೇಳಲಾಗುತ್ತಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ