ಕೈ ತಪ್ಪಿತು ಪರಿಷತ್‌ ಟಿಕೆಟ್‌ : ಸುಮಲತಾಗೆ ಮತ್ತೆ ನಿರಾಶೆ….!

ಬೆಂಗಳೂರು: 

     ಜೂನ್ 13 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯು ಹಿರಿಯ ನಾಯಕ ಸಿ.ಟಿ.ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಮತ್ತು ಬಸವಕಲ್ಯಾಣ ಮಾಜಿ ಶಾಸಕ ಮಾರುತಿರಾವ್ ಜಿ.ಮುಳೆ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ.

    ಮಾಜಿ ಸಚಿವ ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದು, ಸತತ ನಾಲ್ಕು ಬಾರಿ ಗೆದ್ದಿದ್ದ ರವಿ, ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸೋತಿದ್ದರು.

     ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಹಾಲಿ ಶ್ರೀನಿವಾಸ್ ಪೂಜಾರಿ ಆಯ್ಕೆಯಾದರೆ ತೆರವಾಗುವ ಮೇಲ್ಮನೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸಿ.ಟಿ ರವಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ರವಿ ಅವರು ಉಡುಪಿ-ಚಿಕ್ಕಮಗಳೂರು ಅಥವಾ ಬೆಂಗಳೂರು ಉತ್ತರದಿಂದ ಲೋಕಸಭೆಗೆ ಆಕಾಂಕ್ಷಿಯಾಗಿದ್ದರು, ಆದರೆ ಅವರಿಗೆ ಟಿಕೆಟ್ ದೊರೆತಿರಲಿಲ್ಲ. ಪಕ್ಷವು ಈಗ ಅವರನ್ನು ಎಂಎಲ್‌ಸಿ ಹುದ್ದೆಗೆ ಪರಿಗಣಿಸುತ್ತಿದ್ದು, ರವಿ ಅವರ ಅನುಭವವನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ.

    ಭಾನುವಾರ ಚಿಕ್ಕಮಗಳೂರಿನಲ್ಲಿ ಪಕ್ಷದ ಕಾರ್ಯಕರ್ತರು ಸಿ.ಟಿ ರವಿ ಅವರಿಗೆ ಅದ್ದೂರಿ ಸ್ವಾಗತ ಕೋರಿದರು. ಎನ್ ರವಿಕುಮಾರ್ ಅವರ ನಿಷ್ಠೆಗೆ ತಕ್ಕ ಪ್ರತಿಫಲ ಸಿಕ್ಕಿದೆ, ಹೀಗಾಗಿ ಅವರು ಎರಡನೇ ಅವಧಿಗೆ ಪರಿಷತ್ತಿಗೆ ಪ್ರವೇಶಿಸುತ್ತಿದ್ದಾರೆ. ಅವರಿಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಬಹುತೇಕ ನಾಯಕರ ಬೆಂಬಲವಿದೆ. ಕರ್ನಾಟಕದಲ್ಲಿ ಮರಾಠ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲು ಹೈಕಮಾಂಡ್ ಮುಳೆ ಅವರನ್ನು ಆಯ್ಕೆ ಮಾಡಿದೆ.

    ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ಮೊದಲ ಮರಾಠಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರು. ಈ ಹಿಂದೆ ಕಾಂಗ್ರೆಸ್‌ ಪಕ್ಷದಲ್ಲಿದ್ದ ಮುಳೆ 1999ರಲ್ಲಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಗೆದ್ದಿದ್ದರು.

    ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೆ ಟಿಕೆಟ್ ಕೈ ತಪ್ಪಿದೆ. ಪ್ರೊ.ಮಾ.ನಾಗರಾಜ್, ಕುರುಬ, ಮಹಿಳಾ ವಿಭಾಗದ ಮುಖಂಡರಾದ ಮಾಳವಿಕಾ ಅವಿನಾಶ್, ಮಂಜುಳಾ, ಗೀತಾ ವಿವೇಕಾನಂದ ಸೇರಿದಂತೆ ಹಲವು ಆಕಾಂಕ್ಷಿಗಳೂ ನಿರಾಸೆ ಅನುಭವಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೈಕಮಾಂಡ್‌ ಮಾತಿಗೆ ಕಿವಿಗೊಡದ ಕಾರಣ ಮತ್ತೊಬ್ಬ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಅವರಿಗೆ ಎಂಎಲ್‌ಸಿ ಟಿಕೆಟ್ ಕೈ ತಪ್ಪಿದೆ.

    ತುಮಕೂರಿನ ಜಿಲ್ಲಾಧ್ಯಕ್ಷ ರವಿಶಂಕರ್, ಶಾಸಕರಾದ ಬಿ.ಸುರೇಶ್ ಗೌಡ, ಜಿ.ಬಿ.ಜ್ಯೋತಿಗಣೇಶ್ ಸೇರಿದಂತೆ ಮುಖಂಡರು ಮಾಧುಸ್ವಾಮಿ ಅವರ ಉಮೇದುವಾರಿಕೆಗೆ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿ ಪಕ್ಷದ ವರಿಷ್ಠರಿಗೆ ಮನವಿ ಸಲ್ಲಿಸಿದ್ದರು. ಮಾಧುಸ್ವಾಮಿ ಅವರ ನಾಮ ನಿರ್ದೇಶನಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರಬಲ ಲಾಬಿ ನಡೆಸಿದ್ದರು. ಆದರೆ ಹೈಕಮಾಂಡ್ ನಿರಾಕರಿಸಿತು ಎಂದು ಮೂಲಗಳು ತಿಳಿಸಿವೆ.

    ಲೋಕಸಭೆ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು OBC ಗಳಿಗೆ ಒತ್ತು ನೀಡಿರುವುದನ್ನು ಪರಿಗಣಿಸಿ, ಹೈಕಮಾಂಡ್ OBC ಸಮುದಾಯವನ್ನು ಸಬಲೀಕರಣಗೊಳಿಸುವತ್ತ ಗಮನ ಹರಿಸಿತು .ಮೂರು OBC ಅಭ್ಯರ್ಥಿಗಳಲ್ಲಿ ಇಬ್ಬರನ್ನು ಆಯ್ಕೆ ಮಾಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap