ತಮ್ಮ ನಿರ್ಧಾರದ ಬಗ್ಗೆ ಸ್ಪಷ್ಟನೆ ನೀಡಿದ ಸುಮಲತಾ…!

ನನ್ನ ಮಗ ರಾಜಕಾರಣಕ್ಕೆ ಬರಲ್ಲ

ಮಂಡ್ಯ

     ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಮಂಡ್ಯಕ್ಕೆ ಭಾನುವಾರ ಭೇಟಿ ನೀಡಲಿದ್ದಾರೆ. ಇದಕ್ಕೂ ಮುನ್ನ, ಅಂದರೆ ಶುಕ್ರವಾರ ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಭಾರತೀಯ ಜನತಾ ಪಕ್ಷಕ್ಕೆ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು. ಮುಂಬರವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಅವರು ಸ್ಪಷ್ಟಪಡಿಸಿದರು.

    ಪ್ರಧಾನಿ ಮೋದಿ ಅವರು ಭಾರತಕ್ಕೆ ತಂದುಕೊಟ್ಟಿರುವ ಗಣತೆ ಹಾಗೂ ಜಗತ್ತಿನಾದ್ಯಂತ ದೇಶವು ಗಳಿಸಿದ ಖ್ಯಾತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸುಮಲತಾ ಹೇಳಿದರು.

    ಲೋಕಸಭೆಯಲ್ಲಿ ಮಂಡ್ಯ ಕ್ಷೇತ್ರವನ್ನು ಪ್ರತಿನಿಧಿಸುವ ಸುಮಲತಾ ಅವರು ತಾವು ಇರುವವರೆಗೂ ತಮ್ಮ ಮಗ ಅಭಿಷೇಕ್ ರಾಜಕೀಯಕ್ಕೆ ಬರುವುದಿಲ್ಲ ಎಂದು ಭರವಸೆ ನೀಡಿದರು. ಅವರು ಕುಟುಂಬ ರಾಜಕಾರಣದ ವಿರುದ್ಧವಾಗಿದ್ದಾರೆಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link