ನವದೆಹಲಿ:
ದೇಶದ ನಿದ್ದೆ ಕೆಡಿಸಿದ್ದ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದ್ದು, ಏಪ್ರಿಲ್ 16 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ತನಿಖಾ ತಂಡದ ಪ್ರಶ್ನೆಗಳಿಗೆ ಉತ್ತರಿಸಲು ಕೇಜ್ರಿವಾಲ್ ಅವರಿಗೆ ಏಪ್ರಿಲ್ 16 ರಂದು ಬೆಳಗ್ಗೆ 11 ಗಂಟೆಗೆ ಸಿಬಿಐ ಪ್ರಧಾನ ಕಚೇರಿಗೆ ಹಾಜರಾಗುವಂತೆ ಕೇಳಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಈಗಾಗಲೇ ಬಂಧಿಸಿದೆ.ಕಿಕ್ ಬ್ಯಾಕ್ ಹಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ‘ಮದ್ಯ ಲಾಬಿ’ಯ ಪರವಾದ ನೀತಿಗಾಗಿ ವಿವಿಧ ಮಧ್ಯವರ್ತಿಗಳಿಂದ ಹಣ ಪಡೆದು ಅದನ್ನು ಸರ್ಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳಿಗೆ ವಿಶೇಷವಾಗಿ ಎಎಪಿ ನಾಯಕರಿಗೆ ಲಂಚ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ ಈ ಆರೋಪವನ್ನು ಎಎಪಿ ಸ್ಪಷ್ಟವಾಗಿ ನಿರಾಕರಿಸಿದೆ.
