ಡೆಂಗ್ಯೂ ಉಲ್ಭಣ: ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡ ಹೈಕೋರ್ಟ್

ಬೆಂಗಳೂರು:

    ಆಂಗ್ಲ ದೈನಿಕವೊಂದರ ಓದುಗರೊಬ್ಬರು ಅದರ ಸಂಪಾದಕರಿಗೆ ಬರೆದ ಪತ್ರ ಹಾಗೂ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ಡೆಂಗ್ಯೂ ಜ್ವರದ ವರದಿಗಳ ಆಧಾರದ ಮೇಲೆ ರಾಜ್ಯಾದ್ಯಂತ ಡೆಂಗ್ಯೂ ಹರಡುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಸ್ವಯಂ ಪ್ರೇರಿತವಾಗಿ ಬುಧವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕೈಗೆತ್ತಿಕೊಂಡಿದೆ.

    ನಿನ್ನೆ ಅಂದರೆ ಜುಲೈ 9 ರಂದು ಆಂಗ್ಲ ದೈನಿಕವೊಂದರಲ್ಲಿ ಪ್ರಕಟವಾದ ರಾಯಚೂರಿನ ವಿಜಯ ಕುಮಾರ್ ಹೆಚ್ ಕೆ ಎಂಬವರು ಬರೆದಿರುವ ಪತ್ರವನ್ನು ಪರಿಗಣಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಡೆಂಗ್ಯೂ ತಡೆಗಟ್ಟುವ ಮತ್ತು ಪರಿಹಾರ ಕ್ರಮಗಳ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಜ್ವರ ವೇಗವಾಗಿ ಹರಡುತ್ತಿರುವುದಕ್ಕೆ ಕೂಡಲೇ ಪರೀಕ್ಷೆ ನಡೆಸುವಂತೆ ಸೂಚಿಸಿದೆ.

   ಪ್ರಮುಖ ನಗರಗಳಿಂದ ಗ್ರಾಮೀಣ ಪ್ರದೇಶಗಳಿಗೆ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ತೆಗೆದುಕೊಂಡ ಕ್ರಮಗಳ ವಿವರಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ ನ್ಯಾಯಾಲಯ, ತುರ್ತುಪರಿಸ್ಥಿತಿಯಲ್ಲಿ ಚಿಕಿತ್ಸೆ ಪೂರೈಸಲು ಲಭ್ಯವಿರುವ ವೈದ್ಯಕೀಯ ಮೂಲಸೌಕರ್ಯಗಳ ವಿವರಗಳನ್ನು ಒದಗಿಸುವಂತೆ ಸಹ ಕೇಳಿದೆ.

   ಸಂಪಾದಕರಿಗೆ ಬರೆದ ಪತ್ರವು ಡೆಂಗ್ಯೂ ಹರಡುವಿಕೆ ಮತ್ತು ಇತರ ಸಂಬಂಧಿತ ವಿಷಯಗಳಲ್ಲಿ ಸಮಾಜದ ನಾಡಿಮಿಡಿತವನ್ನು ಪ್ರತಿಬಿಂಬಿಸುತ್ತದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಡೆಂಗ್ಯೂ ಹರಡುವಿಕೆಯ ಬಗ್ಗೆ ನಾಡಿನ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿಗಳನ್ನು ಉಲ್ಲೇಖಿಸಿದೆ.

   ಇದುವರೆಗೆ ಅನೇಕ ಜೀವಗಳನ್ನು ಬಲಿ ಪಡೆದ ಡೆಂಗ್ಯೂ ಏಕಾಏಕಿ ಹೆಚ್ಚಾಗಿದ್ದು ರಾಜ್ಯ ಸರ್ಕಾರ ವೈದ್ಯಕೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಬೇಕೆಂದು ವಿಜಯ ಕುಮಾರ್ ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ. ರೋಗ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆಯೂ ವಿವರಿಸಿದ ಅವರು, ಆರೋಗ್ಯ ಇಲಾಖೆಯ ನಿಧಾನಗತಿಯ ಸ್ಪಂದನೆ ರಾಜ್ಯದ ಜನರ ಪರಿಸ್ಥಿತಿಯನ್ನು ಹದಗೆಡಿಸಿದೆ ಎಂದು ಆರೋಪಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap