ನವದೆಹಲಿ
ಭಾರತದ ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಅವರು ಅಂತಾರಾಷ್ಟ್ರೀಯ ಪಂದ್ಯಗಳಿಗೆ ದಿಢೀರ್ ನಿವೃತ್ತಿ ಘೋಷಣೆ ಮಾಡಿದ್ದಾರೆ.ಭಾರತ ತಂಡದ ಪುಟ್‌ಬಾಲ್ ನಾಯಕರಾಗಿದ್ದ ಸುನಿಲ್ ಛೆಟ್ರಿ ಅವರು ಅಂತಾರಾಷ್ಟ್ರೀಯ ಪಂದ್ಯಗಳಿಗೆ ದಿಢೀರ್ ವಿದಾಯ ಹೇಳಿದ್ದು, ಇದು ಅಭಿಮಾನಿಗಳಿಗೆ ಬೇಸರ ತಂದಿದೆ.
ಜೂನ್ 6ರಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯವೇ ಕೊನೆಯದಾಗಿದ್ದು, ಇದೀಗ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಂದ್ಯಗಳಿಗೆ ಸಂಪೂರ್ಣವಾಗಿ ವಿದಾಯ ಹೇಳುವುದಾಗಿ ಛೆಟ್ರಿ ಅವರು ತಿಳಿಸಿದ್ದಾರೆ.
39 ವರ್ಷ ವಯಸ್ಸಿನ ಸುನಿಲ್ ಛೆಟ್ರಿ ಅವರು, ಭಾರತದ ಪರ ಈವರೆಗೆ 150 ಪಂದ್ಯಗಳನ್ನು ಆಡಿದ್ದು, ಈ ವೇಳೆ 94 ಗೋಲುಗಳನ್ನು ಗಳಿಸುವ ಮೂಲಕ ದಾಖಲೆ ಬರೆದಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಫುಟ್ಬಾಲ್ ಇತಿಹಾಸದಲ್ಲಿ ಅತಿಹೆಚ್ಚು ಗೋಲು ಗಳಿಸಿದವರ ಆಟಗಾರರ ಪಟ್ಟಿಯಲ್ಲಿ ಚೆಟ್ರಿ ಅವರು 4ನೇ ಸ್ಥಾನದಲ್ಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ
