ತುಮಕೂರು :
ಇತ್ತೀಚಗೆ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಡಿ.ಸಿ.ಗೌರಿಶಂಕರ್ ರವರು ಕಳೆದ 2018ರ ಚುನಾವಣೆಯಲ್ಲಿ ನಕಲಿ ಬಾಂಡ್ ವಿತರಿಸಿ ಜನರಿಗೆ ಮೋಸ ಮಾಡಿದ್ದಾರೆ ಹಾಗಾಗಿ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು.
ನಕಲಿ ವಿಮೆ ಬಾಂಡ್ ಹಂಚಿಕೆ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಶಾಸಕ ಡಿ. ಸಿ. ಗೌರಿ ಶಂಕರ್ ಆಯ್ಕೆ ಅಸಿಂಧು ಎಂದು ಆದೇಶ ನೀಡಿತ್ತು. ಆದರೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದ ಕಾರಣ ತನ್ನ ಆದೇಶಕ್ಕೆ 30 ದಿನಗಳ ಕಾಲ ತಡೆ ನೀಡಿತ್ತು.
ಇತ್ತೀಚೆಗೆ ಹೈಕೋರ್ಟ್ನಲ್ಲಿ ಸುದೀರ್ಘವಾದ ವಾದ ಮಂಡನೆಯಾಗಿ ತೀರ್ಪನ್ನು ಒಂದೇ ಸಾಲಿನಲ್ಲಿ ನೀಡಿದ್ದರು, ಅದನ್ನು ಪ್ರಶ್ನಿಸಿ ಗೌರಿಶಂಕರ್ ರವರು ಸುಪ್ರೀಂ ಕೋರ್ಟ್ ಕದವನ್ನು ತಟ್ಟಿದ್ದರು. ಅಲ್ಲಿ ಅವರ ಅಪೀಲು ಒಪ್ಪಿಗೆಯಾಗಿ ಚುನಾವಣೆಗೆ ಸ್ಪರ್ಧಿಸಲು ಯಾವುದೇ ರೀತಿಯಾದ ಅಡ್ಡಿಯಿಲ್ಲ, ಸ್ಪರ್ಧಿಸಬಹುದಾಗಿದೆ ಸದ್ಯಕ್ಕೆ ಕೇಸ್ನ್ನು ತಡೆ ಹಿಡಿಯಲಾಗಿದೆಂದಷ್ಟೇ ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
